ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್ ಮಾರಾಟ, ವ್ಯಕ್ತಿ ಬಂಧನ

Last Updated 8 ಮೇ 2021, 6:56 IST
ಅಕ್ಷರ ಗಾತ್ರ

ಬಳ್ಳಾರಿ: ನಗರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ರೆಮ್‌ಡಿಸಿವಿರ್ ಲಸಿಕೆಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಹೇಳಿದರು.

ಸುದ್ದಿಗಾರರೊಂದಿಗೆ ಶನಿವಾರ ಅವರು ಮಾತನಾಡಿ, ರೆಮ್‌ಡಿಸಿವಿರ್ ದಂಧೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿ ಅನ್ವಯ ದಾಳಿ ಕಾರ್ಯಾಚರಣೆ ನಡೆಸಿ ಆರು ಡೋಸ್ ರೆಮ್ ಲಸಿಕೆ ವಶಪಡಿಸಿಕೊಳ್ಳಲಾಗಿದೆ.‌ ರೆಮ್ ಡಿಸಿವಿರ್ ಬ್ಲಾಕ್ ದಂಧೆ ನಡೆಸುತ್ತಿದ್ದ ಕಿಶೋರ್ ಕುಮಾರ್ ಎನ್ನುವ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದರು.

₹3 ಸಾವಿರದಿಂದ ₹4 ಸಾವಿರ ದರ ಇರುವ ಲಸಿಕೆಯ ಪ್ರತಿ ಡೋಸ್ ಲಸಿಕೆಗೆ ₹ 25 ಸಾವಿರದಿಂದ 30ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಆರು ಡೋಸ್ ಲಸಿಕೆಗೆ ಒಂದುವರೆ ಲಕ್ಷದವರೆಗೂ ಪಡೆದು ಲಸಿಕೆ ನೀಡುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿತ್ತು. ಮಾಹಿತಿ ಅನ್ವಯ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಬಂಧಿತ ವ್ಯಕ್ತಿಯ ಹಿಂದೆ ಹಲವು ಜನರು ಇರುವ ಶಂಕೆ ಇದ್ದು ಉಳಿದವರ ಪತ್ತೆಗೆ ಕಾರ್ಯಾಚರಣೆ ನಡೆದಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT