ಗುರುವಾರ , ಅಕ್ಟೋಬರ್ 29, 2020
20 °C

ಎಲ್ಲರ ಆಸ್ತಿ ತನಿಖೆಯಾಗಲಿ: ಕೆಪಿಸಿಸಿ ವಕ್ತಾರ ವಿ.ಎಸ್‌.ಉಗ್ರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಳ್ಳಾರಿ: ‘ಎರಡು ದಶಕಗಳ ಅವಧಿಯಲ್ಲಿ ಅಧಿಕಾರದಲ್ಲಿದ್ದ ಎಲ್ಲ ಪಕ್ಷಗಳ ಮುಖಂಡರ ಆಸ್ತಿ ಗಳಿಕೆ ಕುರಿತು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲಿ’ ಎಂದು ಕೆಪಿಸಿಸಿ ವಕ್ತಾರ ವಿ.ಎಸ್‌.ಉಗ್ರಪ್ಪ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದರು.

‘ನನ್ನದೂ ಸೇರಿದಂತೆ ಕಾಂಗ್ರೆಸ್‍ನ ಎಲ್ಲ ಮುಖಂಡರು, ಬಿಜೆಪಿಯ ಎಲ್ಲ ನಾಯಕರು ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುಟುಂಬದವರ ಆಸ್ತಿಯ ಕುರಿತು ನಿಷ್ಪಕ್ಷ ಪಾತವಾದ ತನಿಖೆಯಾಗಲಿ. ಆಗ ಎಲ್ಲವೂ ಹೊರ ಬರುತ್ತದೆ. ತಪ್ಪಿತಸ್ಥರು ಕಂಡು ಬಂದರೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಕ್ರಿಮಿನಲ್ ಮೊಕದ್ದಮೆ ಹೂಡಲಿ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

‘ಡಿ.ಕೆ.ಶಿವಕುಮಾರ್ ಅವರು ಹೊಲದಲ್ಲಿ ಚಿನ್ನ ಬೆಳೆದಿದ್ದರಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೇಳಿದ್ದಾರೆ. ಮೊದಲ ಬಾರಿ ಶಾಸಕರಾದಾಗ ಅವರ ಆಸ್ತಿ ಎಷ್ಟಿತ್ತು ಈಗೆಷ್ಟಿದೆ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು