ಭಾನುವಾರ, ಡಿಸೆಂಬರ್ 15, 2019
25 °C

ಹೊಸಪೇಟೆ ತಾಲ್ಲೂಕಿನ ಬರಪೀಡಿತ ಪ್ರದೇಶಗಳಿಗೆ ಜಗದೀಶ್ ಶೆಟ್ಟರ್ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಶಾಸಕ ಜಗದೀಶ್ ಶೆಟ್ಟರ್ ಅವರು ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ತಾಲ್ಲೂಕಿನ ಕಾಕುಬಾಳು ಗ್ರಾಮದ ವೀರಭದ್ರಪ್ಪ ಜಗ್ಗಪ್ಪನವರ ಹೊಲಕ್ಕೆ ಭೇಟಿ ನೀಡಿ, ಮಳೆಯಿಲ್ಲದೇ ಒಣಗಿ ಹೋಗಿರುವ ಮೆಕ್ಕೆಜೋಳ ಪರಿಶೀಲನೆ ನಡೆಸಿದರು.

ನಷ್ಟದ ನಿಖರ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿ ಸರ್ಕಾರಕ್ಕೆ ಸಲ್ಲಿಸಬೇಕು. ನಾವು ಪರಿಶೀಲನೆ ನಡೆಸಿದ ನಂತರ ಸರ್ಕಾರ ದ ಮೇಲೆ ಒತ್ತಡ ಹೇರಿ ರೈತರಿಗೆ ಸೂಕ್ತ ಪರಿಹಾರ ಕೊಡಲು ಶ್ರಮಿಸಲಾಗುವುದು ಎಂದು ಶೆಟ್ಟರ್ ಕೃಷಿ ಅಧಿಕಾರಿಗಳು, ರೈತರಿಗೆ ತಿಳಿಸಿದರು.

ಶಾಸಕರಾದ ಬಿ.ಶ್ರೀರಾಮುಲು, ಎಂ.ಎಸ್. ಸೋಮಲಿಂಗಪ್ಪ, ಹಾಲಪ್ಪ ಆಚಾರ್, ಪಕ್ಷದ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಮುಖಂಡರಾದ ಭರಮನಗೌಡ, ಅನಂತ ಪದ್ಮನಾಭ, ಕಟಗಿ ರಾಮಕೃಷ್ಣ, ಕವಿರಾಜ್ ಅರಸ್, ಕಿಶೋರ್ ಪತ್ತಿಕೊಂಡ ಇದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು