ಭಾನುವಾರ, ಅಕ್ಟೋಬರ್ 17, 2021
22 °C

ಹಂಪಿಗೆ ಜಗದೀಶ ಶೆಟ್ಟರ್‌ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ್‌ ಅವರು ಪತ್ನಿ ಶಿಲ್ಪಾ ಅವರೊಂದಿಗೆ ಮಂಗಳವಾರ ಹಂಪಿಗೆ ಭೇಟಿ ನೀಡಿದರು.

ಬೆಳಿಗ್ಗೆ ಹಂಪಿ ವಿದ್ಯಾರಣ್ಯ ಮಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು. ಬಳಿಕ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು. ಅನಂತರ ಕಡಲೆಕಾಲು, ಸಾಸಿವೆಕಾಳು ಗಣಪ, ಉಗ್ರ ನರಸಿಂಹ, ಕಮಲ ಮಹಲ್‌, ಗಜಶಾಲೆ ಸೇರಿದಂತೆ ಇತರೆ ಸ್ಮಾರಕಗಳನ್ನು ಕಣ್ತುಂಬಿಕೊಂಡರು.

ಪತ್ನಿಯೊಂದಿಗೆ ರಥಬೀದಿ ಸೇರಿದಂತೆ ಇತರೆಡೆ ಕಾಲ್ನಡಿಗೆಯಲ್ಲಿ ನಡೆದು ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಉಗ್ರ ನರಸಿಂಹ ಸ್ಮಾರಕದ ಬಳಿ ಎಳನೀರು ಕುಡಿದರು. ಇದು ಅವರ ಖಾಸಗಿ ಭೇಟಿಯಾಗಿತ್ತು. ನವರಾತ್ರಿ ಹಿನ್ನೆಲೆಯಲ್ಲಿ ಹಂಪಿಯಲ್ಲಿ ವಿಶೇಷ ಪೂಜೆ ಸಲ್ಲಿಸುವುದಕ್ಕಾಗಿ ಬಂದಿದ್ದರು. ಯಾರಿಗೂ ವಿಷಯ ಗೊತ್ತಾಗದ ಕಾರಣ ಮುಖಂಡರು, ಕಾರ್ಯಕರ್ತರ ಸುಳಿವಿರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು