ಬುಧವಾರ, ಸೆಪ್ಟೆಂಬರ್ 29, 2021
19 °C

ಕೋವಿಡ್‌ ಮೃತರಿಗೆ ಶ್ರದ್ಧಾಂಜಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ನಗರದಲ್ಲಿ ಶನಿವಾರ ಸಂಜೆ ನಡೆದ ಜನನಿ ಮಹಿಳಾ ಸಬಲೀಕರಣ ಸಮಿತಿಯ ಕಾರ್ಯಕಾರಿಣಿ ಸಭೆಯಲ್ಲಿ ಕೋವಿಡ್‌ನಿಂದ ಮೃತರಾದ ಸಮಿತಿ ಸದಸ್ಯೆಯರಾದ ಕೆರೋಲಿನ್‌, ಶಕ್ತೀಶ್ವರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಮಿತಿಯ ಅಧ್ಯಕ್ಷೆ ನಾಗವೇಣಿ ಹಂಪಿ ಉದ್ಘಾಟಿಸಿ, ‘ಪ್ರತಿಯೊಬ್ಬರೂ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಕುರಿತು ಬೇರೆಯವರಿಗೂ ತಿಳಿಸಬೆಕು’ ಎಂದು ಹೇಳಿದರು.

‘ಸಂಕಷ್ಟದ ಕೋವಿಡ್‌ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಜತೆಗೂಡಿ ಕೆಲಸ ನಿರ್ವಹಿಸೋಣ. ಸರ್ಕಾರಿ ಆಸ್ಪತ್ರೆಯಲ್ಲಿರುವ ಗರ್ಭೀಣಿಯರು, ಬಾಣಂತಿಯರು, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೆರವಾಗೋಣ’ ಎಂದರು.

ಸಮಿತಿ ಗೌರವ ಅಧ್ಯಕ್ಷೆ ರೇಖಾರಾಣಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ, ಉಪಾಧ್ಯಕ್ಷರಾದ ಗೀತಾಶಂಕರ್, ರೋಫಿಯಾ, ಕಾರ್ಯದರ್ಶಿಗಳಾದ ರಾಜೇಶ್ವರಿ, ಆಯಿಶಾ, ಸಂಚಾಲಕರಾದ ಸ್ವಾತಿ ಸಿಂಗ್, ಯುವ ನಾಯಕ ಸಂದೀಪ್ ಸಿಂಗ್, ಎನ್.ವೆಂಕಟೇಶ್, ಗೋವಿಂದ್ ಕುಲಕರ್ಣಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.