ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.17 ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನ

Last Updated 16 ಸೆಪ್ಟೆಂಬರ್ 2021, 14:29 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ನಂತರ ಮೊದಲ ಬಾರಿಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಶುಕ್ರವಾರ (ಸೆ.17) ಆಚರಿಸಲಾಗುತ್ತದೆ.

ಬೆಳಿಗ್ಗೆ 9ಕ್ಕೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್‌ ಸಿಂಗ್‌ ತ್ರಿವರ್ಣ ಧ್ವಜಾರೋಹಣ ಮಾಡುವರು. ಬಳಿಕ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ, ಜನರನ್ನು ಉದ್ದೇಶಿಸಿ ಭಾಷಣ ಮಾಡುವರು.

ಸಂಸದರಾದ ವೈ.ದೇವೇಂದ್ರಪ್ಪ, ಸೈಯದ್‌ ನಾಸೀರ್‌ ಹುಸೇನ್‌, ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಅನಿರುದ್ಧ್ ಪಿ. ಶ್ರವಣ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್‌ ಜೀರೆ, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ, ತಹಶೀಲ್ದಾರ್‌ ಎಚ್‌. ವಿಶ್ವನಾಥ್, ಡಿವೈಎಸ್ಪಿ ವಿಶ್ವನಾಥ್‌ ರಾವ್‌ ಕುಲಕರ್ಣಿ ಪಾಲ್ಗೊಳ್ಳುವರು.

ವಿಮೋಚನಾ ದಿನದ ಮುನ್ನ ದಿನವಾದ ಗುರುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್‌, ಗೃಹರಕ್ಷಕ, ಎನ್‌ಸಿಸಿ ಕೆಡೆಟ್‌ಗಳು ಪಥಸಂಚಲನದ ತಾಲೀಮು ನಡೆಸಿದರು. ಡಿವೈಎಸ್ಪಿ ವಿಶ್ವನಾಥ್‌ ರಾವ್‌ ಕುಲಕರ್ಣಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿದ್ಧತೆ, ಭದ್ರತೆ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT