ಗುರುವಾರ , ಜನವರಿ 28, 2021
27 °C

ಕಂಪ್ಲಿ ಬಂದ್, ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Kampli bandh

ಕಂಪ್ಲಿ: ವಿಜಯನಗರ ಜಿಲ್ಲೆಗೆ ಕಂಪ್ಲಿ ತಾಲ್ಲೂಕು ಸೇರ್ಪಡೆ ಮಾಡದೆ ಇರುವುದನ್ನು ಖಂಡಿಸಿ ಸೋಮವಾರ ಕಂಪ್ಲಿಯಲ್ಲಿ ಬಂದ್, ಪ್ರತಿಭಟನೆ ಆರಂಭವಾಗಿದೆ‌. ತಾಲ್ಲೂಕು ಹೋರಾಟ ಸಮಿತಿ, ವಿವಿಧ ಪ್ರಗತಿಪರ ಸಂಘಟನೆಗಳು ಭಾಗವಹಿಸಿವೆ.

ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದರಿಂದ ಬಿಜೆಪಿ ಮುಖಂಡರು ಕುಪಿತರಾದರು.

ಈ ವೇಳೆ ಶಾಸಕ ಜೆ.ಎನ್. ಗಣೇಶ್ ಮತ್ತು ಬಿಜೆಪಿಯವರ ಮಧ್ಯೆ ವಾಗ್ವಾದ ನಡೆಯಿತು. ನಂತರ ಪೋಲಿಸರು ಮಧ್ಯೆ ಪ್ರವೇಶಿಸಿ ವಾತಾವರಣ ತಿಳಿಗೊಂಡಿತು.

ಡಾ. ಅಂಬೇಡ್ಕರ್ ವೃತ್ತದಲ್ಲಿ‌ ಬಹಿರಂಗ ಸಭೆ ನಡೆಯುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು