ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಜೆ.ಎನ್‌.ಯು ಘಟನೆ ಖಂಡಿಸಿ ಪ್ರತಿಭಟನೆ

Last Updated 6 ಜನವರಿ 2020, 14:13 IST
ಅಕ್ಷರ ಗಾತ್ರ

ಹೊಸಪೇಟೆ: ನವದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲಿನ ಹಲ್ಲೆಯನ್ನು ಖಂಡಿಸಿ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಯಲು ಚಿಂತನ ಸಂಶೋಧನಾ ಬಳಗದವರು ಸೋಮವಾರ ಪ್ರತಿಭಟನೆ ನಡೆಸಿದರು.

‘ಶಂಕಿತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗೂಂಡಾಗಳು ರಾತ್ರಿವೇಳೆಯಲ್ಲಿ ಹೋಗಿ ಹಲ್ಲೆ ನಡೆಸಿದ್ದಾರೆ. ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೂ ಸೂಕ್ತ ಭದ್ರತೆ ಕಲ್ಪಿಸಬೇಕು’ ಎಂದು ಕುಲಸಚಿವ ಎ. ಸುಬ್ಬಣ್ಣ ರೈ ಮೂಲಕ ರಾಷ್ಟ್ರಪತಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಆಗ್ರಹಿಸಿದರು.

‘ಬಡ, ದಲಿತ, ಹಿಂದುಳಿದ ವರ್ಗದವರೇ ಹೆಚ್ಚಾಗಿ ಜೆ.ಎನ್‌.ಯು. ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರದಂತೆ ತಡೆಯಲು ಭಯದ ವಾತಾವರಣ ಸೃಷ್ಟಿಸಲಾಗಿದೆ. ಇದು ತೀರ ಖಂಡನೀಯ. ಕೇಂದ್ರ ಸರ್ಕಾರ ಇಂತಹ ಘಟನೆಗಳು ಆಗದಂತೆ ತಡೆಯಬೇಕು’ ಎಂದು ಒತ್ತಾಯಿಸಿದರು.

ಬಳಗದ ಸಂಗಮೇಶ, ಸಂತೋಷ , ಮಂಜುನಾಥ, ವಿಜಯಭಾಸ್ಕರ, ಬಸವರಾಜ, ಯರ್ರಿಸ್ವಾಮಿ, ಪವಿತ್ರ, ಈರವೇಣಿ, ತಾಯಶ್ರೀ ಮೊದಲಾದವರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT