ಬುಧವಾರ, ಮೇ 27, 2020
27 °C

ಹೊಸಪೇಟೆಯಲ್ಲಿ ನಾಲ್ಕಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ಸೋಂಕು

ಹೊಸಪೇಟೆ: ನಗರದಲ್ಲಿ ಇನ್ನೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ನಗರದಲ್ಲಿ ಸೋಂಕಿತರ  ಸಂಖ್ಯೆ ಶನಿವಾರ ನಾಲ್ಕಕ್ಕೇರಿದೆ. ಇದರೊಂದಿಗೆ ಬಳ್ಳಾರಿ ಜಿಲ್ಲೆ ಸೋಂಕಿತರ ಒಟ್ಟು ಸಂಖ್ಯೆ ಐದಕ್ಕೇರಿದೆ. ಗುರುವಾರ ಸಿರುಗುಪ್ಪದ ಬಾಲಕನಿಗೆ ಸೋಂಕು ತಗುಲಿತ್ತು.

ಇಲ್ಲಿನ ಎಸ್.ಆರ್.ನಗರದ ಒಂದೇ ಕುಟುಂಬದ ಮೂವರಿಗೆ ಮಾ.30ರಂದು ಸೋಂಕು ದೃಢಪಟ್ಟಿತ್ತು. ಈಗ ಅವರ ಸಂಬಂಧಿಕರೊಬ್ಬರಿಗೂ ಸೋಂಕು ತಗುಲಿದ್ದು, 45 ವರ್ಷದ ವ್ಯಕ್ತಿ ಸೋಂಕಿಗೆ ಒಳಗಾಗಿದ್ದು ಬಳ್ಳಾರಿಯ ವಿಮ್ಸ್‌ನಲ್ಲಿ ಐಸೋಲೇಷನ್‌ನಲ್ಲಿ ಇಡಲಾಗಿದೆ.

ಮೂವರಿಗೆ ಸೋಂಕು ದೃಢಪಟ್ಟ ಬಳಿಕ ಅವರ ಸಂಬಂಧಿಕರು ಸೇರಿದಂತೆ ನೆರೆಮನೆಯ ಒಟ್ಟು ಹತ್ತು ಜನರನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಎಲ್ಲರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪೈಕಿ ಒಬ್ಬರಿಗೆ ಸೋಂಕು ತಗುಲಿರುವುದು ಖಚಿತವಾದರೆ, ಇನ್ನುಳಿದ ಒಂಬತ್ತು ಜನರ ವರದಿ ನೆಗೆಟಿವ್ ಬಂದಿದೆ.

ಸೋಂಕು ದೃಢಪಟ್ಟ ವಿಷಯವನ್ನು ಇನ್ನು ಮುಂದೆ ಜಿಲ್ಲಾ ಕೇಂದ್ರದ ಬದಲು ಬೆಂಗಳೂರಿನಲ್ಲಿ ಘೋಷಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಸೋಂಕು ತಗುಲಿರುವ ವಿಷಯವನ್ನು ಹೆಸರು ಹೇಳಲಿಚ್ಛಿಸದ ವೈದ್ಯರು ಪ್ರಜಾವಾಣಿಗೆ ಖಚಿತಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು