ಗುರುವಾರ , ಜನವರಿ 28, 2021
27 °C

ಶ್ರೀರಾಮುಲು, ಆನಂದ್‌ ಸಿಂಗ್‌ ಪುಷ್ಕರ ಪುಣ್ಯಸ್ನಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ತುಂಗಭದ್ರಾ ನದಿ ಪುಷ್ಕರ ಮಹೋತ್ಸವದ ಪ್ರಯುಕ್ತ ಅರಣ್ಯ ಸಚಿವ ಆನಂದ್‌ ಸಿಂಗ್‌, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸೋಮವಾರ ಇಲ್ಲಿನ ಹಂಪಿಯಲ್ಲಿ ಪುಣ್ಯ ಸ್ನಾನ ಮಾಡಿದರು.

ಇಬ್ಬರೂ ಮಡಿ ಬಟ್ಟೆಯುಟ್ಟು, ಹಂಪಿಯ ಚಕ್ರತೀರ್ಥದ ತುಂಗಭದ್ರಾ ನದಿಯಲ್ಲಿ ಮಿಂದೆದ್ದರು. ಬಳಿಕ ನದಿಗೆ ಪೂಜೆ ನೆರವೇರಿಸಿದರು.

ಭಾನುವಾರ ಏರ್ಪಡಿಸಿದ್ದ ಬಿಜೆಪಿಯ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಪಾಲ್ಗೊಂಡ ನಂತರ ಇಬ್ಬರೂ ಸಚಿವರು ರಾತ್ರಿ ನಗರದಲ್ಲಿಯೇ ವಾಸ್ತವ್ಯ ಹೂಡಿದ್ದರು. ಸಚಿವ ಆನಂದ್‌ ಸಿಂಗ್‌ ಅವರ ಮಗ ಸಿದ್ದಾರ್ಥ ಸಿಂಗ್‌ ಹಾಗೂ ಅವರ ಬೆಂಬಲಿಗರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು