ಕಾರ್ಮಿಕರು ವೃತ್ತಿ ಕೌಶಲ್ಯ ತರಬೇತಿ ಪಡೆಯಿರಿ

7

ಕಾರ್ಮಿಕರು ವೃತ್ತಿ ಕೌಶಲ್ಯ ತರಬೇತಿ ಪಡೆಯಿರಿ

Published:
Updated:
Prajavani

ಬಳ್ಳಾರಿ: ನೋಂದಾಯಿತ ಕಟ್ಟಡ ಕಾರ್ಮಿಕರು ವೃತ್ತಿ ಕೌಶಲ್ಯ ಕುರಿತು ಸಮರ್ಪಕ ತರಬೇತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ.ಎನ್.ಐಲಿ ಹೇಳಿದರು.

ಜಿಲ್ಲಾ ಕಾರ್ಮಿಕ ಇಲಾಖೆ ಮತ್ತು ನಿರ್ಮಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನಗರದ ನಿರ್ಮಿತಿ ಕೇಂದ್ರದ ಕಚೇರಿ ಆವರಣದಲ್ಲಿ ಶುಕ್ರವಾರ ಶ್ರಮ ಸಾಮರ್ಥ್ಯ ಯೋಜನೆಯಡಿ “ಟ್ರೈನಿಂಗ್ ಕಂ ಟೂಲ್ ಕಿಟ್” ಕಾರ್ಯಕ್ರಮ ಮತ್ತು ಎಲೆಕ್ಟ್ರಕಲ್ ವೃತ್ತಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕಟ್ಟಡ ಕಾರ್ಮಿಕರು ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಮುಂದಾಗಬೇಕು ಎಂದು ಹೇಳಿದರು.

ಕಾರ್ಮಿಕ ನಿರೀಕ್ಷಕ ರವಿದಾಸ್ ಕಾರ್ಮಿಕ ಇಲಾಖೆಯಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಪರಿಕರಗಳನ್ನು ವಿತರಿಸಿದರು. ನಿರ್ಮಿತಿ ಕೇಂದ್ರದ ಅಧಿಕಾರಿ ಮಂಜುಳಾ.ಡಿ.ವಿ, ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್.ಎನ್.ಶಿವರಾಜ, ಮಿತಿಲಾ ರೆಡ್ಡಿ, ನಡ್ಲಿಕೇರಿ ನಾಗರಾಜ, ಶ್ರೀಧರ್, ಯಶವಂತ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !