ಕತ್ತು ಕುಯ್ದು ಮಹಿಳೆಯ ಬರ್ಬರ ಹತ್ಯೆ

ಹೊಸಪೇಟೆ: ತಾಲ್ಲೂಕಿನ ಕಾಳಘಟ್ಟ ಗುಡ್ಡಪ್ರದೇಶದಲ್ಲಿ ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಮೃತ ಮಹಿಳೆಯನ್ನು ನಾಗೇನಹಳ್ಳಿಯ ನಾಗಮ್ಮ (45) ಎಂದು ಗುರುತಿಸಲಾಗಿದೆ. ‘ಮಹಿಳೆ ಶನಿವಾರ ಮಧ್ಯಾಹ್ನ ಹೊಲಕ್ಕೆ ಕೆಲಸಕ್ಕೆ ಹೋಗುವಾಗ ಕುಡುಗೋಲಿನಿಂದ ಕತ್ತು ಕೊಯ್ದು, ತಲೆಯನ್ನು ಜಜ್ಜಿ ಹತ್ಯೆ ಮಾಡಿರುವ ಸಾಧ್ಯತೆ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಡಿವೈಎಸ್ಪಿ ವಿ.ರಘುಕುಮಾರ್, ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಶ್ರೀನಿವಾಸ ಮೇಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.