ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ: ‘ಭೂಸುಧಾರಣೆ ಕಾಯ್ದೆ ಬಲಪಡಿಸಿದ್ದು ಅರಸು’

Last Updated 20 ಆಗಸ್ಟ್ 2021, 9:07 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 106ನೇ ಜನ್ಮ ದಿನ ಹಾಗೂ ಸದ್ಭಾವನಾ ದಿನ ನಗರ ಹಾಗೂ ತಾಲ್ಲೂಕಿನಲ್ಲಿ ಶುಕ್ರವಾರ ಆಚರಿಸಲಾಯಿತು.

ತಾಲ್ಲೂಕು ಕಚೇರಿ:ಗ್ರೇಡ್-2 ತಹಶೀಲ್ದಾರ್‌ ಮೇಘ ಅವರು ಡಿ‌.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿದರು. ‘ ಕೊವೀಡ್-19 ಮೂರನೇ ಅಲೆಯಿಂದಾಗಿ ಅರಸು ಅವರ ಜನ್ಮದಿನ ಹಾಗೂ ಸದ್ಭಾವನಾ ದಿನ ಸರಳವಾಗಿ ಆಚರಿಸಲಾಗುತ್ತಿದೆ’ ಎಂದರು.

‘ಎರಡು ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಸುದೀರ್ಘ ಆಡಳಿತ ನಡೆಸಿದ ಅರಸು, ಭೂಸುಧಾರಣೆ ಕಾಯ್ದೆಯನ್ನು ಬಲಪಡಿಸಿದರು. ಭೂಸುಧಾರಣೆ ಕಾಯ್ದೆಯಿಂದ ಊಳುವವನೇ ಒಡೆಯ ಎಂಬ ಧ್ಯೇಯವನ್ನು ಮತ್ತಷ್ಟು ಬಲಪಡಿಸಿ ಎಲ್ಲರಲ್ಲಿ ಉತ್ತಮ ಆಡಳಿತಗಾರರಾಗಿ ನೆನಪಿನಲ್ಲಿ ಉಳಿದಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಅಡಿಪಾಯ ಹಾಕಿದವರು ಅರಸು’ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಮುಖಂಡ ವೈ.ಯಮುನೇಶ್ ಮಾತನಾಡಿ, ‘ಸರ್ವರಿಗೂ ಸಾಮಾಜಿಕ ನ್ಯಾಯ, ದಮನಿತ ಸಮುದಾಯಗಳ ಮೇಲಿದ್ದ ಕಾಳಜಿಯಿಂದ ಅವರು ಎಲ್ಲರಿಗಿಂತ ವಿಭಿನ್ನವಾಗಿ ಆಡಳಿತ ನಡೆಸಿ ಮನೆಮಾತಾಗಿದ್ದರು. ತಳಸಮುದಾಯಗಳ ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ಒದಗಿಸಲು ಹಾವನೂರು ಆಯೋಗವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದರು. ಅವರ ಆಡಳಿತದ ಅವಧಿಯಲ್ಲಿ ಹಿಂದುಳಿದ ವರ್ಗಗಳ ವಸತಿ ನಿಲಯಗಳು ವಿದ್ಯಾರ್ಥಿಗಳಿಗೆ ಅನುಕೂಲವಾದವು’ ಎಂದು ನೆನೆದರು.

ಶಿರಸ್ತೇದಾರ ರಮೇಶ್, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಚ್.ನಡುವಿನಮನಿ, ಪಾಪಣ್ಣ ಇದ್ದರು.

ಹಂಪಿ ಕನ್ನಡ ವಿಶ್ವವಿದ್ಯಾಲಯ:ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಆಯೋಜಿಸಿದ್ದ ಸದ್ಭಾವನಾ ದಿನಾಚರಣೆಯಲ್ಲಿ ಕುಲಪತಿ ಪ್ರೊ. ಸ.ಚಿ. ರಮೇಶ ಪ್ರತಿಜ್ಞಾ ವಿಧಿ ಬೋಧಿಸಿದರು. ಕುಲಸಚಿವ ಪ್ರೊ. ಎ. ಸುಬ್ಬಣ್ಣ ರೈ, ವಿಜ್ಞಾನ ನಿಕಾಯದ ಡೀನ್‌ ಮಾಧವ ಪೆರಾಜೆ, ಎನ್.ಎಸ್.ಎಸ್ ಘಟಕದ ಸಂಯೋಜನಾ ಅಧಿಕಾರಿ ಅಮರೇಶ ಯತಗಲ್, ಉಪಕುಲಸಚಿವ ಎ. ವೆಂಕಟೇಶ, ಸಹಾಯಕ ಕುಲಸಚಿವ ಗುರುಬಸಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT