ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷ ಸೇವಿಸಿ ವಕೀಲ ಆತ್ಮಹತ್ಯೆ: ವಿಷಪ್ರಾಶನದ ವಿಡಿಯೊ ವೈರಲ್

ಹೊಸಪೇಟೆ
Last Updated 25 ಆಗಸ್ಟ್ 2020, 15:25 IST
ಅಕ್ಷರ ಗಾತ್ರ

ಹೊಸಪೇಟೆ: ವಕೀಲರೊಬ್ಬರು ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸುತ್ತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮವಾರ ನಗರದಲ್ಲಿ ಈ ಘಟನೆ ಜರುಗಿದ್ದು, ಅದರ ವಿಡಿಯೊ ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. ಮಹೇಶ್‌ (37) ಮೃತ ವಕೀಲ.

'ಮಹೇಶ್‌ ಅವರು ನಗರದ ಈಕ್ವಿಟಾಸ್‌ ಬ್ಯಾಂಕಿನಲ್ಲಿ ಕಾನೂನು ಸಲಹೆಗಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಾನೂನುಬಾಹಿರವಾಗಿ ಸಾಲ ಮಂಜೂರಾತಿ ಮಾಡಿಸಿಕೊಡಲು ದಾಖಲೆಗಳನ್ನು ಸಿದ್ಧಪಡಿಸುವಂತೆ ಬ್ಯಾಂಕಿನ ವ್ಯವಸ್ಥಾಪಕರು ಅವರ ಮೇಲೆ ತೀವ್ರ ಒತ್ತಡ ಹಾಕಿದ್ದರು. ಇದರಿಂದಾಗಿ ಅವರು ಒತ್ತಡಕ್ಕೆ ಒಳಗಾಗಿದ್ದರು. ಬ್ಯಾಂಕಿನ ಚೇಂಬರ್‌ನಲ್ಲಿ ವಿಷಪ್ರಾಶನ ಮಾಡಿ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಬಳ್ಳಾರಿಯ ವಿಮ್ಸ್‌ಗೆ ಕರೆದ್ಯೊಯುವ ಮಾರ್ಗ ಮಧ್ಯೆ ಜೀವ ಬಿಟ್ಟಿದ್ದಾರೆ. ಮೃತರ ಪತ್ನಿ ಸಂಧ್ಯಾ ಅವರು ಕೊಟ್ಟಿರುವ ದೂರಿನ ಮೇರೆಗೆ ಬ್ಯಾಂಕಿನ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪಟ್ಟಣ ಠಾಣೆ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT