ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋನಿಗೆ ಬಿದ್ದ ಮತ್ತೊಂದು ಚಿರತೆ

ಜಿಲ್ಲೆಯಲ್ಲಿ ಏಳು ಚಿರತೆ ಸೆರೆಹಿಡಿದ ಅರಣ್ಯ ಇಲಾಖೆ
Last Updated 16 ಜನವರಿ 2019, 9:47 IST
ಅಕ್ಷರ ಗಾತ್ರ

ಹೊಸಪೇಟೆ: ತಾಲ್ಲೂಕಿನ ಧರ್ಮಸಾಗರ–ಕಾಕುಬಾಳ ಮಾರ್ಗ ಮಧ್ಯದಲ್ಲಿರುವ ಗುಬ್ಬಿ ಗುಡ್ಡದಲ್ಲಿ ಬುಧವಾರ ಚಿರತೆ ಬೋನಿಗೆ ಬಿದ್ದಿದೆ.

ಒಂದು ತಿಂಗಳಿಂದ ಈ ಭಾಗದಲ್ಲಿ ಚಿರತೆ ಉಪಟಳ ಹೆಚ್ಚಾಗಿತ್ತು. ಜಾನುವಾರುಗಳನ್ನು ಕೊಂದು ಹಾಕಿತ್ತು. ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಬೋನು ಇರಿಸಿತ್ತು. ಆ ಬೋನಿಗೆ ಚಿರತೆ ಬಿದ್ದಿದ್ದು, ಅದನ್ನು ಅರಣ್ಯ ಇಲಾಖೆ ಬೇರೆಡೆ ಸ್ಥಳಾಂತರಿಸಿದೆ.

ಕಂಪ್ಲಿ ತಾಲ್ಲೂಕಿನ ದೇವಲಾಪುರ ಗ್ರಾಮದ ರಾಜನಮಟ್ಟಿಯಲ್ಲಿ ಮಂಗಳವಾರ ಚಿರತೆ ಬೋನಿಗೆ ಬಿದ್ದಿತ್ತು. ಕಂಪ್ಲಿ ತಾಲ್ಲೂಕುವೊಂದರಲ್ಲೇ ನವೆಂಬರ್‌ನಿಂದ ಇದುವರೆಗೆ ಒಟ್ಟು ಐದು ಚಿರತೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದರೆ, ಸಂಡೂರಿನಲ್ಲಿ ಇತ್ತೀಚೆಗೆ ಚಿರತೆಯೊಂದನ್ನು ಸೆರೆ ಹಿಡಿದಿದ್ದರು. ಹೀಗೆ ಜಿಲ್ಲೆಯಲ್ಲಿ ಒಟ್ಟು ಏಳು ಚಿರತೆಗಳನ್ನು ಹಿಡಿದಿರುವ ಅರಣ್ಯ ಇಲಾಖೆ ಅವುಗಳನ್ನು ಬೇರೆಡೆ ಸ್ಥಳಾಂತರಿಸಿದೆ. ಸದ್ಯ ಚಿರತೆ ಸೆರೆ ಸಿಕ್ಕಿರುವ ಭಾಗದ ಗ್ರಾಮಸ್ಥರು ಆತಂಕದಿಂದ ಹೊರಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT