ಶುಕ್ರವಾರ, ಫೆಬ್ರವರಿ 28, 2020
19 °C

ಬಳ್ಳಾರಿ ಉಸ್ತುವಾರಿ ಶ್ರೀರಾಮುಲುಗೆ ಆದ್ಯತೆ ಸಿಗಲಿ: ಸಚಿವ ಆನಂದ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹೊಸಪೇಟೆ: ‘ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಆದ್ಯತೆ ನೀಡಬೇಕೆಂದು ಬಿಜೆಪಿ ಹೈಕಮಾಂಡ್ ಗೆ ಮನವಿ ಮಾಡುವೆ’ ಎಂದು ಸಚಿವ ಆನಂದ್ ಸಿಂಗ್ ಹೇಳಿದರು.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಬೆಂಗಳೂರಿನಿಂದ ಶುಕ್ರವಾರ ಕ್ಷೇತ್ರಕ್ಕೆ ಹಿಂತಿರುಗಿದ ನಂತರ ಇಲ್ಲಿ ಹಮ್ಮಿಕೊಂಡಿರುವ ಭಟ್ರಹಳ್ಳಿ ಆಂಜನೇಯ ಸ್ವಾಮಿ ಕಳಸ ಹಾಗೂ ಹಾಗೂ ನವಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ನನಗೆ ಜಿಲ್ಲೆಯ ಉಸ್ತುವಾರಿ ವಹಿಸಿದರೆ ಒಪ್ಪಿಕೊಳ್ಳುವೆ. ಆದರೆ, ಅದಕ್ಕೂ ಮುನ್ನ ಶ್ರೀರಾಮುಲು ಅವರಿಗೆ ಆದ್ಯತೆ ಕೊಡುವಂತೆ ತಿಳಿಸುತ್ತೇನೆ. ಸ್ವತಃ ಶ್ರೀರಾಮುಲು ಅವರ ಅಭಿಪ್ರಾಯ ಪಡೆದು ಮುಂದುವರೆಯುವೆ’ ಎಂದು ತಿಳಿಸಿದರು.

‘ಯಾರ ತ್ಯಾಗದಿಂದ ಸರ್ಕಾರ ರಚನೆಯಾಗಿದೆ ಎನ್ನುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗೊತ್ತು. ಯಾವ ಖಾತೆ ಕೊಡಬೇಕು ಎನ್ನುವುದು ಅವರಿಗೆ ಬಿಟ್ಟದ್ದು. ಇಂತಹದ್ದೇ ಖಾತೆ ಬೇಕೆಂದು ಬೇಡಿಕೆ ಇಟ್ಟಿಲ್ಲ’ ಎಂದರು.

‘ಮಂತ್ರಿಯಾಗೋದು ನನ್ನ ಉದ್ದೇಶವಾಗಿರಲಿಲ್ಲ. ವಿಜಯನಗರ ಜಿಲ್ಲೆ ಮಾಡೋದೆ ನನ್ನ ಗುರಿ. ಜಿಲ್ಲೆಯಾದರೆ ಮಾತ್ರ ನನ್ನ ಬೇಡಿಕೆ ಈಡೇರಿದಂತೆ. ವಿಜಯನಗರ ಸಾಮ್ರಾಜ್ಯದ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು. ಪಂಪಾ ವಿರೂಪಾಕ್ಷೇಶ್ವರ ಆಶೀರ್ವಾದ ಮಾಡುತ್ತಾನೆ  ಎಂಬ ಭರವಸೆ ಇದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು