ವೀರಶೈವ ಲಿಂಗಾಯತ ನಿಗಮಕ್ಕೆ ₹500 ಕೋಟಿಸರ್ಕಾರದ ಕ್ರಮ ಸ್ವಾಗತಿಸಿದ ಮಹಾಸಭೆ

ಹೊಸಪೇಟೆ: ‘ರಾಜ್ಯ ಸರ್ಕಾರವು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ, ಅದಕ್ಕೆ ₹500 ಕೊಟಿ ಮೀಸಲಿಟ್ಟಿರುವುದು ಸ್ವಾಗತಾರ್ಹ’ ಎಂದು ಅಖಿಲ ಭಾರತ ವೀರಶೈವ ಮಹಾಸಭೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
‘ವೀರಶೈವ ಲಿಂಗಾಯತ ಧರ್ಮವು ಶತಮಾನಗಳ ಇತಿಹಾಸ ಹೊಂದಿದೆ. ಕಾಯಕ–ದಾಸೋಹದಂತಹ ಪರಿಕಲ್ಪನೆಗಳನ್ನು ಮನುಷ್ಯಕುಲಕ್ಕೆ ಕೊಟ್ಟಿದೆ. ರಾಜ್ಯ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ವೀರಶೈವ–ಲಿಂಗಾಯತರಿದ್ದಾರೆ. ಈಗಲೂ ಈ ಧರ್ಮದಲ್ಲಿ ಅನೇಕ ಬಡವರಿದ್ದಾರೆ. ನಿಗಮ ಸ್ಥಾಪನೆಯಿಂದ ಬಡವರ ಉದ್ಧಾರ ಸಾಧ್ಯವಾಗಲಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
‘ನಿಗಮ ಸ್ಥಾಪಿಸಬೇಕು ಎನ್ನುವುದು ಬಹುವರ್ಷಗಳ ಬೇಡಿಕೆಯಾಗಿತ್ತು. ಅದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಅಭಿನಂದನಾರ್ಹರು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.