ಸೋಮವಾರ, ಮಾರ್ಚ್ 1, 2021
17 °C

ಮೈಲಾರದಲ್ಲಿ ಪೊಲೀಸರ ದಾಳಿ : ಅಕ್ರಮ ಮದ್ಯವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೂವಿನಹಡಗಲಿ: ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಸ್ಥಳಗಳ ಮೇಲೆ ಪೊಲೀಸರು ಮಂಗಳವಾರ ದಾಳಿ ನಡೆಸಿ ₹ 89,000 ಮೌಲ್ಯದ 18 ಲೀಟರ್ ಅಕ್ರಮ ಮದ್ಯ, ₹ 3,010 ನಗದು ವಶಪಡಿಸಿಕೊಂಡಿದ್ದಾರೆ.

ಮೈಲಾರದಲ್ಲಿ ಅಕ್ರಮ ಮದ್ಯದ ಹಾವಳಿ ತಡೆಗಟ್ಟಿ ಸುಕ್ಷೇತ್ರದ ಪಾವಿತ್ರ್ಯತೆ ಕಾಪಾಡುವಂತೆ ಗ್ರಾಮದ ಮಹಿಳೆಯರು, ರೈತ ಸಂಘದ ಮುಖಂಡರು ಸೋಮವಾರ ತಹಶೀಲ್ದಾರ್‌ಗೆ ಮನವಿ ಮಾಡಿದ್ದರು.

ಸಿಪಿಐ ಕೆ.ರಾಮರೆಡ್ಡಿ ನೇತೃತ್ವದ ಪೊಲೀಸ್ ತಂಡ ಮೈಲಾರ ಗ್ರಾಮದ ಮೂರು ಕಡೆಗಳಲ್ಲಿ ದಾಳಿ ನಡೆಸಿ ಅಕ್ರಮ ಮದ್ಯ ವಶಪಡಿಸಿಕೊಂಡಿದೆ. ಅಕ್ರಮದಲ್ಲಿ ತೊಡಗಿದ್ದ ಆರೋಪಿಗಳಾದ ಹೊಳಲು ಗ್ರಾಮದ ಸೊಪ್ಪಿನ ಪ್ರಕಾಶ, ಮೈಲಾರದ ತೇಜಪ್ಪನವರ ಮಾರುತಿ, ಜಜ್ಜೂರಿ ಪುಟ್ಟಪ್ಪ, ಮಡಿವಾಳರ ಬಸಪ್ಪರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ದಾಳಿಯಲ್ಲಿ ಮುಖ್ಯಪೇದೆ ಕೆ.ನಾಗರಾಜ, ಶ್ರೀಶೈಲ ಮತ್ತು ಶಿವಪ್ಪ ಇದ್ದರು. ಈ ಕುರಿತು ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು