‘ಸಾಲ ಮನ್ನಾ: ಮಾತು ತಪ್ಪಿದ ಮುಖ್ಯಮಂತ್ರಿ’

7

‘ಸಾಲ ಮನ್ನಾ: ಮಾತು ತಪ್ಪಿದ ಮುಖ್ಯಮಂತ್ರಿ’

Published:
Updated:

ಹೂವಿನಹಡಗಲಿ: ‘ಅಧಿಕಾರ ನೀಡಿದರೆ 24 ಗಂಟೆಯೊಳಗೆ ರೈತರ ಕೃಷಿ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿಯಾಗಿ ತಿಂಗಳು ಕಳೆದರೂ ಸಾಲ ಮನ್ನಾ ಮಾಡಲು ಮೀನಮೇಷ ಎಣಿಸುತ್ತಿದ್ದಾರೆ’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗುರುಲಿಂಗನಗೌಡ ಟೀಕಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಕೃಷಿ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಕುಮಾರಸ್ವಾಮಿ ವಚನ ಭ್ರಷ್ಟರಾಗಿದ್ದಾರೆ. ಮುಂದೊಂದು ದಿನ ಜನತೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಆರ್. ಬಸವನಗೌಡ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಎಂ.ಬಿ. ಬಸವರಾಜ, ತಾ.ಪಂ. ಸದಸ್ಯ ಈಟಿ. ಲಿಂಗರಾಜ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಪೂಜಪ್ಪ, ಸಂಜೀವರೆಡ್ಡಿ, ಲಂಕೇಶನಾಯ್ಕ, ಶಿರಾಜ್ ಬಾವಿಹಳ್ಳಿ, ಜಯಣ್ಣ ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !