ಗುರುವಾರ , ಆಗಸ್ಟ್ 6, 2020
25 °C

ಕೊಟ್ಟೂರಿನಲ್ಲಿ ಸ್ವಯಂ ಪ್ರೇರಿತ ಲಾಕ್‌ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಟ್ಟೂರು: ಪಟ್ಟಣ ಸೇರಿ ತಾಲ್ಲೂಕಿನದ್ಯಾಂತ 30ಕ್ಕೂ ಹೆಚ್ಚು  ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್‌ಡೌನ್ ಮಾಡಲಾಗಿದೆ.

ವರ್ತಕರು ಪಟ್ಟಣದಲ್ಲಿ ಜನದಟ್ಟಣೆ ತಡೆಯುವ ಜತೆಗೆ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಿ ಸ್ವಯಂ ಪ್ರೇರಿತರಾಗಿ ಲಾಕ್‌ಡೌನ್ ಮಾಡಿಕೊಂಡಿದ್ದಾರೆ. ಅಂಗಡಿಗಳು ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ತೆರೆದಿರುತ್ತವೆ. 

ಇಂದು ಪಟ್ಟಣದ ವರ್ತಕರು ಬೆಳೆಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವ್ಯಾಪಾರ ಮಾಡಿದರು. 2 ಗಂಟೆಯ ನಂತರ ಸ್ವಯಂ ಪ್ರೇರಿತರಾಗಿ ಅಂಗಡಿಗಳ ಬಾಗಿಲು ಹಾಕಿದರು.

ಹಳ್ಳಿಗಳಿಂದ ಬಂದ ಜನರಿಗೆ ಸ್ವಯಂ ಪ್ರೇರಿತ ಲಾಕ್‌ನಿಂದ ಬೇಸರವಾಯಿತಾದರೂ ಕೊಟ್ಟೂರಿನ ಜನರ ನಿಲುವಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು