ರಾಜ್ಯದಲ್ಲಿ ಶೀಘ್ರವೇ ಲವ್ ಜಿಹಾದ್ ತಡೆ ಕಾನೂನು ಜಾರಿ: ನಳಿನ್ ಕುಮಾರ್ ಕಟೀಲ್

ಹೊಸಪೇಟೆ: ‘ಶೀಘ್ರವೇ ರಾಜ್ಯದಲ್ಲಿ ಲವ್ ಜಿಹಾದ್ ತಡೆ ಕಾನೂನು ಜಾರಿಗೆ ತಂದು ಮಹಿಳೆಯರಿಗೆ ರಕ್ಷಣೆ ಒದಗಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಗೆ ಬಂದಿದೆ. ಅದೇ ರೀತಿ ಲವ್ ಜಿಹಾದ್ ಕಾನೂನು ಕೂಡ ಜಾರಿಗೆ ತರಲಾಗುವುದು. ಇದು ಜಾತ್ಯಾತೀತ ರಾಷ್ಟ್ರ. ಡಾ.ಬಿ.ಆರ್. ಅಂಬೇಡ್ಕರ್ ರಚಿಸಿರುವ ಸಂವಿಧಾನ ಒಪ್ಪಿಕೊಂಡಿದ್ದೇವೆ. ಆದರೆ, ಹಿಂದೂ ಸಂಸ್ಕೃತಿಯ ದೇಶ, ಹಿಂದೂ ದೇಶ’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.