ಗುಳೆ ಹೋಗದಿರಿ: ಜಿ.ಪಂ ಸಿಇಓ

7
ಆಧಾರ್ ತಿದ್ದುಪಡಿ ಕೇಂದ್ರಕ್ಕೆ ಚಾಲನೆ

ಗುಳೆ ಹೋಗದಿರಿ: ಜಿ.ಪಂ ಸಿಇಓ

Published:
Updated:
Deccan Herald

ಬಳ್ಳಾರಿ: ‘ಕೂಲಿಕಾರರು ಬೆಂಗಳೂರು, ಗೋವಾದಂತಹ ಮಹಾನಗರಗಳಿಗೆ ಕೆಲಸಕ್ಕಾಗಿ ಗುಳೆ ಹೋಗದೆ ಉದ್ಯೋಗ ಖಾತ್ರಿ ಅಡಿ ಕೆಲಸ ಮಾಡಬಹುದು. ಅದಕ್ಕಾಗಿ ಎಲ್ಲರಿಗೂ ಉದ್ಯೋಗ ಚೀಟಿಗಳನ್ನು ವಿತರಿಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

ತಾಲ್ಲೂಕಿನ ಕಪ್ಪಗಲ್ಲು ಗ್ರಾಮ ಪಂಚಾಯ್ತಿಯಲ್ಲಿ ಗುರುವಾರ ಆಧಾರ್ ತಿದ್ದುಪಡಿ ಕೇಂದ್ರ ಉದ್ಘಾಟಿಸಿದ ಬಳಿಕ ಅವರು, ಖಾತ್ರಿ ಯೋಜನೆ ಕುರಿತು ಕೂಲಿಕಾರ್ಮಿಕರಿಗೆ ಜಾಗೃತಿ ಮೂಡಿಸುವ ವಿಶೇಷ ರೋಜಗಾರ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ನಿಮ್ಮ ಗ್ರಾಮದಲ್ಲೆ ಕೆಲಸ ನೀಡುವ ಸದುದ್ದೇಶದಿಂದ ಜಿಲ್ಲೆಯಾದ್ಯಂತ ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಿ ವಿಶೇಷ ರೋಜಗಾರ್ ದಿವಸ್ ಆಚರಿಸಲಾಗುತ್ತಿದೆ. ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

‘ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ನೀಡಲಾಗುವುದು. ಪ್ರತಿ ದಿನ ₨ 249 ಪಾವತಿಸಲಾಗುವುದು. ಬಡ ರೈತರು ಕೃಷಿ ಜಮೀನಿನಲ್ಲಿ ವೈಯಕ್ತಿಕ ಕಾಮಗಾರಿಗಳಾದ ದನದ ದೊಡ್ಡಿ, ಕುರಿದೊಡ್ಡಿಗಳ ನಿರ್ಮಿಸಿಕೊಳ್ಳಲು ಅವಕಾಶವಿದೆ’ ಎಂದರು.

‘ಸಮುದಾಯ ಆಧಾರಿತ ಕಾಮಗಾರಿಗಳಾದ ಚೆಕ್ ಡ್ಯಾಂಗಳ ನಿರ್ಮಾಣ, ಶಾಲಾ ಕಾಂಪೌಂಡ್, ಆಟದ ಮೈದಾನ, ಶಾಲಾ ಕೈತೋಟ ಮತ್ತು ಕೆರೆ–-ಕಾಲುವೆಗಳ ಹೂಳೆತ್ತುವ ಕಾಮಗಾರಿಗಳು ಇಲ್ಲದ ಕಡೆ ವೈಯಕ್ತಿಕ ಕಾಮಗಾರಿಗಳಲ್ಲಿ ಕೂಲಿಕಾರರು ಕೆಲಸ ಮಾಡಬಹುದು’ ಎಂದು ಹೇಳಿದರು.

ಪಂಚಾಯ್ತಿ ಅಧ್ಯಕ್ಷ ರಾಮಣ್ಣ, ಉಪಾಧ್ಯಕ್ಷೆ ಕೋಟೆ ಈರಮ್ಮ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಜಾನಕಿರಾಮ್, ವಲಯ ಅರಣ್ಯಾಧಿಕಾರಿ ಶಶಿಕಾಂತ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೃಷ್ಣಮ್ಮ, ಅಭಿವೃದ್ಧಿ ಅಧಿಕಾರಿ ಟಿ.ಎಂ.ಗೋವಿಂದಪ್ಪ ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !