ಮಂಗಳವಾರ, ಮೇ 17, 2022
23 °C

ಮಲಬಾಚುವ ಕಾರ್ಮಿಕರಿಗೆ ಪುನರ್ವಸತಿ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಗ್ರಾಮ ಪಂಚಾಯಿತಿಗಳಲ್ಲಿ ಈ ಹಿಂದೆ ಮಲಬಾಚುವ ಕೆಲಸ ಮಾಡುತ್ತಿದ್ದವರಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳು ಹಾಗೂ ಪುನರ್ವಸತಿ ಶಿಬಿರ ಮಂಗಳವಾರ ನಗರದ ತಾಲ್ಲೂಕು ಪಂಚಾಯಿತಿಯಲ್ಲಿ ನಡೆಯಿತು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ ಮಾತನಾಡಿ, ‘ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಹತ್ತು ಜನ ಮಲಬಾಚುವ ಕಾಯಕ ಮಾಡುತ್ತಿದ್ದವರು ಹಾಗೂ ಅವರ ಅವಲಂಬಿತರನ್ನು ಗುರುತಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಇಲಾಖೆ ಹಾಗೂ ಅಭಿವೃದ್ಧಿ ನಿಗಮಗಳಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ’ ಎಂದರು.

‘ಸಮಾಜ ಕಲ್ಯಾಣ ಇಲಾಖೆಯಿಂದ ಅವರ ಮಕ್ಕಳಿಗೆ ಮೊರಾರ್ಜಿ ಸೇರಿದಂತೆ ವಿವಿಧ ವಸತಿ, ವಿದ್ಯಾರ್ಥಿ ನಿಲಯಗಳಲ್ಲಿ ಉಚಿತ ಪ್ರವೇಶ ದೊರಕಿಸಿಕೊಡಲಾಗಿದೆ. ₹3 ಸಾವಿರ ವಿಶೇಷ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಕುಟುಂಬದಲ್ಲಿನ ನಿರುದ್ಯೋಗಿಗಳಿಗೆ ವ್ಯಾಪಾರ ಕಲ್ಪಿಸಲು ₹1 ಲಕ್ಷ ನೇರ ಸಾಲ ಒದಗಿಸಲಾಗುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಶಿಬಿರದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅಶೋಕ್ ತೋಟದ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಉಮೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಸಂತ್ ಕುಮಾರ್, ಸಂಪನ್ಮೂಲ ವ್ಯಕ್ತಿ ರಾಮಚಂದ್ರಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು