ಮಂಗಳವಾರ, ಅಕ್ಟೋಬರ್ 27, 2020
20 °C

ಹೊಸಪೇಟೆಯಲ್ಲಿ ಬಿರುಸಿನ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಗುರುವಾರ ಸಂಜೆ ಬಿರುಸಿನ ಮಳೆಯಾಗಿದೆ.

ದಿನವಿಡೀ ಸುಡುವ ಬಿಸಿಲು, ವಿಪರೀತ ಸೆಕೆ ಇತ್ತು. ಸಂಜೆ ಕಾರ್ಮೋಡ ಕವಿದು, ವರ್ಷಧಾರೆಯಾಯಿತು. ಸಂಜೆ 7.15ರ ಸುಮಾರಿಗೆ ಆರಂಭವಾದ ಮಳೆ ಗಂಟೆಗೂ ಹೆಚ್ಚು ಸಮಯ ಸುರಿಯಿತು.

ತಾಲ್ಲೂಕಿನ ಹೊಸೂರು, ನಾಗೇನಹಳ್ಳಿ, ವ್ಯಾಸನಕೆರೆ, ಇಪ್ಪಿತ್ತೇರಿ ಮಾಗಾಣಿ, ಧರ್ಮದಗುಡ್ಡ, ಕಾಳಘಟ್ಟ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ.

ಬುಧವಾರ ರಾತ್ರಿ ಕೂಡ ಉತ್ತಮ ಮಳೆಯಾಗಿತ್ತು. ಬಿರುಗಾಳಿ, ಗುಡುಗು ಮಿಂಚು ಸಹಿತ ಎರಡು ಗಂಟೆಗೂ ಅಧಿಕ ಸಮಯ ಮಳೆಯಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು