ಕೂಡ್ಲಿಗಿ: ತಾಲ್ಲೂಕಿನ ಚೌಡಾಪುರ ಕೆರೆಯಲ್ಲಿ ಬುಧವಾರ ನರೇಗಾ ಕಾಮಗಾರಿಯಲ್ಲಿ ಕೆರೆಯ ಹೂಳೆತ್ತುವ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕ ಬಾರಿಕರ ಪಂಪಣ್ಣ (46) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನರೇಗಾ ಯೋಜನೆಯಲ್ಲಿ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಯುನ್ನು ಸ್ಥಳೀಯ ಗ್ರಾಮ ಪಂಚಾಯ್ತಿಯಿಂದ ಮಂಗಳವಾರದಿಂದ ಆರಂಭಿಸಲಾಗಿದ್ದು, ಮಂಗಳವಾರ ಬೆಳಿಗ್ಗೆ ಪಂಪಣ್ಣ ಕೆಲಸದಲ್ಲಿ ತೊಡಗಿದ್ದಾಗ ತೀವ್ರ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

ಇದನ್ನು ನೋಡಿದ ಜೊತೆ ಕೆಲಸಗಾರರು ಹಾಗೂ ಪಂಚಾಯ್ತಿ ಕಾರ್ಯದರ್ಶಿ ತಕ್ಷಣ ಪ್ರಥಮ ಚಿಕಿತ್ಸೆ ನೀಡಿ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದಾರೆ. ಆದರೆ ಈ ಹೊತ್ತಿಗೆ ಪಂಪಣ್ಣ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಜಿ.ಎಂ. ಬಸಣ್ಣ, ಮೃತರ ಕುಟುಂಬಕ್ಕೆ ಇಲಾಖೆಯಿಂದ ನೀಡುವ 25ಸಾವಿರ ರೂಪಾಯಿ ಪರಹಾರದ ಜೊತೆಗೆ ಹೆಚ್ಚಿನ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.