ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಸಚಿವರಿಂದ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Last Updated 8 ಏಪ್ರಿಲ್ 2021, 15:20 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಮೂಲಸೌಕರ್ಯ ಅಭಿವೃದ್ಧಿ, ಹಜ್‌ ಮತ್ತು ವಕ್ಫ್‌ ಖಾತೆ ಸಚಿವ ಆನಂದ್‌ ಸಿಂಗ್‌ ಅವರು ಗುರುವಾರ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಜಿಲ್ಲಾಡಳಿತ ಭವನ ನಿರ್ಮಿಸಲು ಉದ್ದೇಶಿಸಿರುವ ತುಂಗಭದ್ರಾ ಸ್ಟೀಲ್ಸ್‌ ಪ್ರಾಡಕ್ಟ್ಸ್‌ (ಟಿಎಸ್‌ಪಿ) ಸ್ಥಳಕ್ಕೆ ಭೇಟಿ ನೀಡಿದರು. ಹೊಸ ಕಟ್ಟಡ ನಿರ್ಮಾಣವಾಗುವವರೆಗೆ ಟಿಎಸ್‌ಪಿ ಹಳೆಯ ಕಟ್ಟಡದಲ್ಲಿ ಕಚೇರಿ ಆರಂಭಿಸುವುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

‘ಟಿಎಸ್‌ಪಿ ಹಳೆಯ ಕಟ್ಟಡದ ನವೀಕರಣ, ಅಗತ್ಯ ಮೂಲ ಸೌಲಭ್ಯ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಯೋಜನಾ ವರದಿ ಸಿದ್ಧಪಡಿಸಿ, ಆದಷ್ಟು ಶೀಘ್ರ ಕೆಲಸ ಪ್ರಾರಂಭಿಸಬೇಕು’ ಎಂದು ಸಚಿವರು, ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಅವರು ಜೋಳದರಾಶಿ ಗುಡ್ಡದಲ್ಲಿ ನಡೆಯುತ್ತಿರುವ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.

ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಪಿ. ಅನಿರುದ್ಧ ಶ್ರವಣ್‌, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್‌ ಎಚ್‌. ವಿಶ್ವನಾಥ್‌, ಲೋಕೋಪಯೋಗಿ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT