ಬುಧವಾರ, ಜೂನ್ 16, 2021
22 °C

‘ಪ್ಯಾಕೇಜ್‌ ಹಣ ಫಲಾನುಭವಿಗಳಿಗೆ ತಲುಪಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರುಗುಪ್ಪ: ತಾಲ್ಲೂಕಿನಲ್ಲಿ 67 ಮಂದಿ ಕೋವಿಡ್‌ನಿಂದ ಮೃತಪಟ್ಟಿರುವುದು ನೋವಿನ ಸಂಗತಿ ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ಕಳವಳ ವ್ಯಕ್ತಪಡಿಸಿದರು.

ಇಲ್ಲಿಯ ತಾಲ್ಲೂಕು ಪಂಚಾಯ್ತಿಯಲ್ಲಿ ಗುರುವಾರ ನಡೆದ ಕೋವಿಡ್ ನಿಯಂತ್ರಣ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಮತ್ತು ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್ ಹಣವನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಶ್ರಮವಹಿಸಿ ಎಂದು ಶಾಸಕರು ಸಲಹೆ ಮಾಡಿದರು.

ತಾಲ್ಲೂಕಿನಲ್ಲಿ ಇಲ್ಲಿಯವರೆಗೆ 2,099 ಪಾಸಿಟಿವ್ ಪ್ರಕರಣಗಳಾಗಿದ್ದು ಅದರಲ್ಲಿ 1,341 ಮಂದಿ ಗುಣಮುಖರಾಗಿದ್ದಾರೆ. ಸದ್ಯ 691 ಸಕ್ರಿಯ ಪ್ರಕರಣಗಳಲ್ಲಿ 508 ಸೋಂಕಿತರು ಹೋಂ ಐಸೋಲೇಷನಲ್ಲಿದ್ದಾರೆ, 19 ಮಂದಿ ಕೋವಿಡ್ ಆರೈಕೆ ಕೇಂದ್ರದಲ್ಲಿದ್ದಾರೆ ಇನ್ನೂ 164 ಸೋಂಕಿತರು ಖಾಸಗಿ, ಪ್ರಾಥಮಿಕ ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.

ತಹಶೀಲ್ದಾರ್ ಎಸ್.ಬಿ.ಕೂಡಲಗಿ ಮಾತನಾಡಿ, ತಾಲ್ಲೂಕಿನ ರಾವಿಹಾಳ್, ರಾರಾವಿ, ಸಿರಿಗೇರಿ, ಕರೂರು, ತೆಕ್ಕಲಕೋಟೆಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು. ತಾಲ್ಲೂಕು ಪಂಚಾಯ್ತಿ ಇಒ ಶಿವಪ್ಪ ಸುಭೇದಾರ್, ಪೌರಾಯುಕ್ತ ಪ್ರೇಮ್ ಚಾರ್ಲ್ಸ್‌, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ದೇವರಾಜ್, ಬಿಇಒ ಪಿ.ಡಿ.ಭಜಂತ್ರಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.