ಜಿಲ್ಲಾ ಉಸ್ತುವಾರಿಯಿಂದ ಆನಂದ ಸಿಂಗ್ ತೆರವಿಗೆ ಶಾಸಕ ಜಿ. ಸೋಮಶೇಖರ ರೆಡ್ಡಿ ಆಗ್ರಹ

ಬಳ್ಳಾರಿ: ಜಿಲ್ಲಾ ಉಸ್ತುವಾರಿ ಹೊಣೆಯಿಂದ ಸಚಿವ ಆನಂದ್ ಸಿಂಗ್ ಅವರನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವೆ' ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ' ಜಿಲ್ಲೆ ವಿಭಜನೆಯಿಂದ ನೋವಾಗಿದೆ. ಸರ್ಕಾರ ಪಕ್ಷ ನಿಷ್ಠೆಯನ್ನು ಕಡೆಗಣಿಸಿ ಪಕ್ಷಾಂತರಿಗಳಿಗೆ ಮಣೆ ಹಾಕಿದೆ.' ಎಂದು ದೂರಿದರು.
ಸಚಿವ ಆನಂದ ಸಿಂಗ್ ಕೇಳಿದ್ದನ್ನೆಲ್ಲ ಮುಖ್ಯಮಂತ್ರಿ ಕೊಡುತ್ತಿದ್ದಾರೆ. ಜಿಲ್ಲೆಯನ್ನು ಹೋಳು ಮಾಡಿದ ಉಸ್ತುವಾರಿ ಸಚಿವು ನಮಗೆ ಬೇಡವೇ ಬೇಡ ಎಂದು ಪ್ರತಿಪಾದಿಸಿದರು.
'ಆಂಧ್ರ ಗಡಿಯಿಂದ ಬಳ್ಳಾರಿ ಕೇವಲ 10 ಕಿಲೋಮೀಟರ್ ದೂರದಲ್ಲಿದೆ. ಬೆಳಗಾವಿ ಜಿಲ್ಲೆಯ ರೀತಿಯಲ್ಲಿ ಇನ್ನೊಂದು ಜಿಲ್ಲೆಯಲ್ಲಿ ಬೆಂಕಿ ಹಚ್ಚುವ ಪ್ರಯತ್ನದ ಭಾಗವಾಗಿ ವಿಭಜನೆ ನಡೆದಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.