ಗುರುವಾರ , ನವೆಂಬರ್ 26, 2020
22 °C
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನ

ಮತದಾನಕ್ಕೆ ಕೊರೊನಾ ಸೋಂಕಿತರಿಗೆ ಕೊನೆಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ‘ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ದಿನ ಮತದಾನದ ಅವಧಿ ಮುಗಿಯುವ ಕೊನೆಯ ಒಂದು ಗಂಟೆ ಕಾಲ ಕೊರೊನಾ ಸೋಂಕಿತರಿಗೆ ಮತದಾನದ ಅವಕಾಶ ನೀಡಿರುವುದರಿಂದ ಮತದಾನ ಸಿಬ್ಬಂದಿ ಆ ಸಂದರ್ಭದಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು’ ಎಂದು ತರಬೇತುದಾರ ಪನಮೇಶುಲು ಹೇಳಿದರು.

ಸೋಂಕಿತರಿಗೆ ಮತದಾನದ ಅವಕಾಶ ನೀಡುವ ಕುರಿತು ಚುನಾವಣೆ ಸಿಬ್ಬಂದಿಗೆ ನಗರದಲ್ಲಿ ಬುಧವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ’ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಪಿಪಿಇ ಕಿಟ್ ಧರಿಸುವುದು ಕಡ್ಡಾಯ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು’ ಎಂದು ಸಲಹೆ ನೀಡಿದರು.

ಪಿಪಿಇ ಕಿಟ್‌ ಧರಿಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವೈದ್ಯಕೀಯ ಸಿಬ್ಬಂದಿ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದರು.  ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಉಪವಿಭಾಗಾಧಿಕಾರಿ ರಮೇಶ ಕೋನರೆಡ್ಡಿ ಮಾರ್ಗಸೂಚಿಗಳ ಬಗ್ಗೆ ವಿವರ ನೀಡಿದರು. ತಹಸೀಲ್ದಾರ್ ಯು.ನಾಗರಾಜ ಇದ್ದರು.

ಜಿಲ್ಲೆಯಲ್ಲಿ ಒಟ್ಟು 28 ಮತಕೇಂದ್ರಗಳಲ್ಲಿದ್ದು 6,753 ಮತದಾರರರಿದ್ದಾರೆ. ಅ.28ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು