ಸೋಮವಾರ, ಸೆಪ್ಟೆಂಬರ್ 20, 2021
22 °C

ಹೊಸಪೇಟೆ | ಚೆಕ್‌ಪೋಸ್ಟ್‌ನಲ್ಲಿ ₹ 12 ಲಕ್ಷ ನಗದು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ತಾಲ್ಲೂಕಿನ ಭುವನಹಳ್ಳಿ ಚೆಕ್‌ಪೋಸ್ಟ್‌ ಬಳಿ ಚುನಾವಣಾ ಆಯೋಗದ ಸಿಬ್ಬಂದಿ ಮಂಗಳವಾರ ಸಂಜೆ ₹12 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

‘ಜಿಂದಾಲ್‌ನಿಂದ ನಗರದ ಕಡೆಗೆ ಬರುತ್ತಿದ್ದ ಕಾರು ತಡೆದು ಪರಿಶೀಲನೆ ನಡೆಸಿದಾಗ ₹12 ಲಕ್ಷ ನಗದು ಪತ್ತೆಯಾಗಿದೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

‘ಈ ನಗದು ಯಾರದ್ದು, ಎಲ್ಲಿಗೆ ಸಾಗಿಸುತ್ತಿದ್ದರು ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಿದೆ’ ಎಂದು ಹೆಸರು ಹೇಳಲಿಚ್ಛಿಸದ ಪೊಲೀಸ್‌ ಅಧಿಕಾರಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು