ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ಜಿಲ್ಲೆಯಾದ್ಯಂತ ಉತ್ತಮ ಮಳೆ

Last Updated 2 ಸೆಪ್ಟೆಂಬರ್ 2020, 12:38 IST
ಅಕ್ಷರ ಗಾತ್ರ

ಹೊಸಪೇಟೆ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಬುಧವಾರ ಉತ್ತಮ ಮಳೆಯಾಗಿದೆ.

ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಮಧ್ಯಾಹ್ನ 3ಕ್ಕೆ ಆರಂಭಗೊಂಡ ಬಿರುಸಿನ ಮಳೆ ಸತತ ಒಂದು ಗಂಟೆ ಸುರಿಯಿತು. ಬಳಿಕ ಸಂಜೆಯ ವರೆಗೆ ಜಿಟಿಜಿಟಿ ಮಳೆ ಮುಂದುವರಿದಿತ್ತು.

ತಾಲ್ಲೂಕಿನ ಮರಿಯಮ್ಮನಹಳ್ಳಿ, ಕೊಂಡನಾಯಕನಹಳ್ಳಿ, ಹೊಸೂರು, ವ್ಯಾಸನಕೆರೆ, ವಡ್ಡರಹಳ್ಳಿ, ಸಂಕ್ಲಾಪುರ, ಮಲಪನಗುಡಿ, ಹಂಪಿ, ಕಮಲಾಪುರ ಸೇರಿದಂತೆ ಹಲವೆಡೆ ಮಳೆಯಾಗಿರುವುದು ವರದಿಯಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ ದಟ್ಟ ಕಾರ್ಮೋಡಗಳು ದಟ್ಟೈಸಿಕೊಂಡು ವರ್ಷಧಾರೆಯಾಯಿತು.

ಜಿಲ್ಲೆಯ ಸಂಡೂರು, ಕೊಟ್ಟೂರು, ಕೂಡ್ಲಿಗಿ, ಹೂವಿನಹಡಗಲಿ, ತೋರಣಗಲ್ಲು, ಕುಡಿತಿನಿ, ಕಾನಹೊಸಹಳ್ಳಿಯಲ್ಲಿಯೂ ಸಾಧಾರಣ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT