ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸ್ಮಾರಕಗಳ ಸಂರಕ್ಷಣೆ ಎಲ್ಲರ ಹೊಣೆ’

Last Updated 15 ಅಕ್ಟೋಬರ್ 2019, 14:33 IST
ಅಕ್ಷರ ಗಾತ್ರ

ಹೊಸಪೇಟೆ: ‘ಇತಿಹಾಸ, ಪರಂಪರೆ, ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿನಾಡಿನ ಅಮೂಲ್ಯ ಸಂಪತ್ತು. ಅವುಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಿ ಇಡುವುದು ನಮ್ಮೆಲ್ಲರ ಜವಾಬ್ದಾರಿ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸ.ಚಿ. ರಮೇಶ ಹೇಳಿದರು.

ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ಮಾರಕಗಳ ರಕ್ಷಣೆ ಮತ್ತು ಸ್ವಚ್ಛತೆ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ಹಂಪಿ ಸ್ಮಾರಕಗಳು ವಿಶ್ವಪರಂಪರೆಯ ಪಟ್ಟಿಯಲ್ಲಿ ಸೇರಿರುವುದು ಹೆಮ್ಮೆಯ ಸಂಗತಿ. ಇಂತಹ ಭವ್ಯ ಸ್ಮಾರಕಗಳನ್ನು ಸಂರಕ್ಷಿಸುವ ಕಾರ್ಯಕ್ಕೆ ಸರ್ಕಾರದ ಜೊತೆ ಸಾರ್ವಜನಿಕರು ಅದರಲ್ಲೂ ವಿದ್ಯಾರ್ಥಿಗಳು ಮತ್ತು ಯುವಜನತೆ ಕೈಜೋಡಿಸಬೇಕು’ ಎಂದರು.

ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಮುಖ್ಯಸ್ಥ ರಮೇಶ ನಾಯಕ ಮಾತನಾಡಿ, ‘ಇಡೀ ಭಾರತವೇ ಒಂದು ಬಯಲು ವಸ್ತು ಸಂಗ್ರಹಾಲಯ. ಆದರೆ, ಭಾರತೀಯರಿಗೆ ಇತಿಹಾಸದ ಪ್ರಜ್ಞೆ ಇಲ್ಲ. ಇತಿಹಾಸವನ್ನು ಬಿಂಬಿಸುವ ಮನುಷ್ಯನ ಹೆಜ್ಜೆಯ ಗುರುತುಗಳನ್ನು ಗುರುತಿಸುವ ಮತ್ತು ರಕ್ಷಿಸುವ ಕೆಲಸವಾಗಬೇಕು’ ಎಂದರು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಪುರಾತತ್ವ ಸಹಾಯಕ ಆರ್. ಮಂಜ ನಾಯ್ಕ ಮಾತನಾಡಿ, ‘ಸ್ಮಾರಕಗಳು ಪರಂಪರೆಯ ಪ್ರತೀಕ. ಐತಿಹಾಸಿಕ ದೇವಾಲಯಗಳು, ಶಾಸನಗಳು, ವೀರಗಲ್ಲುಗಳನ್ನು ನಮ್ಮ ನಿಜವಾದ ಆಸ್ತಿ. ಅವುಗಳನ್ನು ರಕ್ಷಿಸುವುದು ಕರ್ತವ್ಯ’ ಎಂದು ಹೇಳಿದರು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕ ಎಸ್.ಕೆ. ವಾಸುದೇವ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಚಾಲಕ ಅಮರೇಶ್ ಯತಗಲ್, ಸಂಶೋಧನಾ ವಿದ್ಯಾರ್ಥಿಗಳಾದ ನಾಗರಾಜ, ಸುನಿಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT