ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಲಾರ ಜಾತ್ರೆ: ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಲು ಆದೇಶ

ಮೈಲಾರ ಸುಕ್ಷೇತ್ರಕ್ಕೆ ಎಸ್ಪಿ ಭೇಟಿ
Last Updated 11 ಫೆಬ್ರುವರಿ 2022, 13:23 IST
ಅಕ್ಷರ ಗಾತ್ರ

ಹೂವಿನಹಡಗಲಿ: ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಮೈಲಾರ ಜಾತ್ರೆಗೆ ಹೊರಗಿನ ಭಕ್ತರು ಹಾಗೂ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು, ಮೈಲಾರ ಸುಕ್ಷೇತ್ರದ ಎಲ್ಲ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ.ಅರುಣ್ ಸೂಚಿಸಿದರು.

ಶುಕ್ರವಾರ ಸುಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಜಾತ್ರಾ ಬಂದೋಬಸ್ತ್ ಕುರಿತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೈಲಾರ ಗ್ರಾಮ ಸಂಪರ್ಕಿಸುವ ನಾಲ್ಕು ಮಾರ್ಗಗಳಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ನಿಗಾ ಇರಿಸಬೇಕು. ಸುಕ್ಷೇತ್ರ ವ್ಯಾಪ್ತಿಯ ಹೊಲ, ಗದ್ದೆಗಳಲ್ಲಿ ವಾಸ್ತವ್ಯವಿರಲು ಅವಕಾಶ ಇರುವುದಿಲ್ಲ. ಈ ಕುರಿತು ಸಾರ್ವಜನಿಕರಿಗೆ ಮುಂಚಿತವಾಗಿ ತಿಳಿವಳಿಕೆ ಮೂಡಿಸಬೇಕು ಎಂದು ತಿಳಿಸಿದರು.

ಫೆ.18ರಂದು ಕಾರ್ಣಿಕೋತ್ಸವ ಜರುಗುವ ಡೆಂಕನಮರಡಿ ಹಾಗೂ ಸುಕ್ಷೇತ್ರದಲ್ಲಿ ಅಗತ್ಯ ಪೊಲೀಸ್ ಭದ್ರತೆ ಒದಗಿಸಲಾಗುವುದು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೇ ಜಾತ್ರೆಯನ್ನು ಯಶಸ್ವಿಗೊಳಿಸಿ ಎಂದು ಸೂಚಿಸಿದರು.

ಡಿವೈಎಸ್.ಪಿ ಹಾಲಮೂರ್ತಿ ರಾವ್, ಸಿಪಿಐ ರಮೇಶ ಕುಲಕರ್ಣಿ, ಹಿರೇಹಡಗಲಿ ಪಿಎಸ್‌ಐ ದಾದಾವಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT