ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನು ಬಳಿಗಾರಗೆ ನಾಡೋಜ ಪ್ರದಾನ

ಹಂಪಿ ಕನ್ನಡ ವಿ.ವಿ. ಆಡಳಿತ ಮಂಡಳಿ ಸದಸ್ಯರಾಗಿದ್ದಕ್ಕೆ ಜಾಲತಾಣಗಳಲ್ಲಿ ಆಕ್ಷೇಪ
Last Updated 30 ಜನವರಿ 2019, 16:09 IST
ಅಕ್ಷರ ಗಾತ್ರ

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ನಾಡೋಜ ಗೌರವ ಪದವಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಅವರಿಗೆ ಬುಧವಾರ ವಿ.ವಿ.ಯಲ್ಲಿ ನಡೆದ ನುಡಿಹಬ್ಬದಲ್ಲಿ ಪ್ರದಾನ ಮಾಡಲಾಯಿತು.

ರಾಜ್ಯಪಾಲ ವಜುಭಾಯಿ ವಾಲಾ, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರ ಅನುಪಸ್ಥಿತಿಯಲ್ಲಿ ವಿ.ವಿ. ಕುಲಪತಿ ಪ್ರೊ. ಮಲ್ಲಿಕಾ ಎಸ್‌. ಘಂಟಿ, ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್‌.ಕಿರಣ ಕುಮಾರ ಅವರು ಬಳಿಗಾರ ಅವರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಿದರು.

‘ನನ್ನನ್ನು ನಾಡೋಜ ಗೌರವಕ್ಕೆ ಆಯ್ಕೆ ಮಾಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿರುವ ವಿಷಯ ಗಮನಕ್ಕೆ ಬಂದಿಲ್ಲ. ಕಾನೂನಿನ ಪ್ರಕಾರ ಆಡಳಿತ ಮಂಡಳಿ ಒಮ್ಮತದಿಂದ ಮೂವರು ಹೆಸರನ್ನು ರಾಜ್ಯಪಾಲರಿಗೆ ಕಳುಹಿಸಿತ್ತು. ಅದರಲ್ಲಿ ನನ್ನ ಹೆಸರು ಅಂತಿಮಗೊಂಡಿದೆ ಎಂದು ಮಾಧ್ಯಮಗಳ ಮೂಲಕ ನನಗೆ ವಿಷಯ ಗೊತ್ತಾಯಿತು. ಅಂದಹಾಗೆ, ನಾನು ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಿರಲಿಲ್ಲ’ ಎಂದು ಮನು ಬಳಿಗಾರಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮನು ಬಳಿಗಾರ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾಗಿದ್ದು, ಅವರನ್ನು ನಾಡೋಜಕ್ಕೆ ಆಯ್ಕೆ ಮಾಡಿರುವುದು ಸರಿಯಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ ದಿನವಿಡೀ ಚರ್ಚೆ ನಡೆದಿತ್ತು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಲು ಕುಲಪತಿ ಪ್ರೊ. ಮಲ್ಲಿಕಾ ಎಸ್‌. ಘಂಟಿ ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT