ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕ ಬೆಲೆಗೆ ನಂದಿನಿ ಹಾಲು ಮಾರಾಟ, ಬೇಕರಿ ಮಾಲೀಕನ ವಿರುದ್ಧ ಪ್ರಕರಣ

Last Updated 12 ಏಪ್ರಿಲ್ 2020, 9:15 IST
ಅಕ್ಷರ ಗಾತ್ರ

ಹೊಸಪೇಟೆ: ಎಂ.ಆರ್‌.ಪಿ. ದರಕ್ಕಿಂತ ಹೆಚ್ಚಿನ ಬೆಲೆಗೆ ನಂದಿನಿ ಹಾಲಿನ ಪ್ಯಾಕೆಟ್‌ ಮಾರಾಟ ಮಾಡುತ್ತಿದ್ದ ಇಲ್ಲಿನ ಚಿತ್ತವಾಡ್ಗಿಯ ಬೇಕರಿ ಮಾಲೀಕ ವೆಂಕಟೇಶ ಗಾದಿಯಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಕೋವಿಡ್‌–19 ಸಹಾಯವಾಣಿ ಸಂಖ್ಯೆ 08392–277100ಗೆ ಕರೆ ಮಾಡಿ ದೂರು ಕೊಟ್ಟಿದ್ದರು. ದೂರಿನ ಹಿನ್ನೆಲೆಯಲ್ಲಿ ಆಹಾರ ಇಲಾಖೆಯ ಶಿರಸ್ತೇದಾರ ಎಚ್‌. ನಾಗರಾಜ, ಆಹಾರ ಇನ್‌ಸ್ಪೆಕ್ಟರ್‌ ಆರ್‌. ಅಜಿತ್‌ ಕುಮಾರ್‌, ಕಾನೂನು ಮಾಪನ ಅಧಿಕಾರಿ ಪ್ರೇಮಾ ಅವರು ಜಂಟಿಯಾಗಿ ದಾಳಿ ನಡೆಸಿದಾಗ ಅಕ್ರಮವಾಗಿ ನಂದಿನಿ ಉತ್ಪನ್ನಗಳು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ.

‘ಲಾಭ ಗಳಿಸುವುದಕ್ಕಾಗಿ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಖಚಿತವಾಗಿದ್ದರಿಂದ ಬೇಕರಿ ಮಾಲೀಕರ ವಿರುಧ್ದ ಕಾನೂನು ಮಾಪನ ಕಾಯ್ದೆ 2011 ಕಲಂ 18(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ನಾಗರಾಜ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT