ಭವ್ಯ ಪರಂಪರೆ ಪರಿಚಯಕ್ಕೆ ಮೋದಿ ಪೂಜೆ: ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್

ಹೊಸಪೇಟೆ (ವಿಜಯನಗರ): ‘ಪ್ರಧಾನಿ ನರೇಂದ್ರ ಮೋದಿಯವರು ಈ ದೇಶದ ಕಲೆ, ಸಂಸ್ಕೃತಿ, ಭವ್ಯ ಪರಂಪರೆಯನ್ನು ಪರಿಚಯಿಸಲು ಶಕ್ತಿ ಕೇಂದ್ರವಾದ ಕೇದಾರನಾಥದಲ್ಲಿ ನ. 5ರಂದು ಪೂಜೆ ಹಮ್ಮಿಕೊಂಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತಿಳಿಸಿದರು.
ಕೇದಾರನಾಥ ಪೂಜೆ ಕಾರ್ಯಕ್ರಮದ ಪ್ರಯುಕ್ತ ಮಂಗಳವಾರ ತಾಲ್ಲೂಕಿನ ಕಮಲಾಪುರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಬಿಜೆಪಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಆ ದಿನ ಕೇದಾರನಾಥದಿಂದ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುವುದು. ಜತೆಗೆ ಹಂಪಿಯಲ್ಲಿ ವಿರೂಪಾಕ್ಷೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಲಾಗುವುದು’ ಎಂದು ಹೇಳಿದರು.
‘ವಿರೂಪಾಕ್ಷ ದೇವಾಲಯ ರಾಜಗೋಪುರದ ಮುಂಭಾಗದಲ್ಲಿ ನ.5ರಂದು ಬೆಳಿಗ್ಗೆ 8ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ವಿರೂಪಾಕ್ಷೇಶ್ವರನಿಗೆ ವಿಶೇಷ ಅಭಿಷೇಕ ಮಾಡಲಾಗುವುದು. ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ಕೇದಾರನಾಥ ದೇವಸ್ಥಾನದ ಮಹತ್ವ ಸಾರುವರು’ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಜೀರೆ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಕವಿತಾ ಈಶ್ವರ್ ಸಿಂಗ್, ಶಂಕರ್ ಮೇಟಿ, ಪ್ರಶಾಂತ್ ಕಡ್ಡಿರಾಂಪುರ, ಯಲ್ಲಪ್ಪ, ಅನಿಲ್ ನಾಯ್ಡು, ರಮೇಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.