ಮಂಗಳವಾರ, ಅಕ್ಟೋಬರ್ 27, 2020
28 °C

ಬಳ್ಳಾರಿ: ಸರಳ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಸಂಕೀರ್ಣದಲ್ಲಿ ಶನಿವಾರ ಸರಳವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಸಿಂಗ್‌ ಅವರ ಭಾವಚಿತ್ರಕ್ಕೆ ಪ್ರೊಬೆಷನರಿ ಐಎಎಸ್ ಅಧಿಕಾರಿ ರಾಹುಲ್ ಸಂಕನೂರ ಪುಷ್ಪ ನಮನ ಸಲ್ಲಿಸಿದರು.

ಇಲಾಖೆಯ ಸಹಾಯಕ ನಿರ್ದೇಶಕ ಹರಿಸಿಂಗ್ ರಾಥೋಡ್, ಕ್ರೀಡಾ ಸಂಕೀರ್ಣದ ವ್ಯವಸ್ಥಾಪಕ ಶಿವಕುಮಾರ ನಾಯಕ್, ಹಾಕಿ ತರಬೇತುದಾರರಾದ ಮಹ್ಮದ್ ಜಾಕಿರ್, ಜಿಲ್ಲಾ ಅಥ್ಲೆಟಿಕ್ ತರಬೇತುದಾರ ಕೆ.ಎನ್.ರಾಮಸ್ವಾಮಿ, ಷಟಲ್ ಬ್ಯಾಡ್ಮಿಂಟನ್ ತರಬೇತುದಾರ ರವಿ, ಮಲ್ಟಿ ಜಿಮ್ ತರಬೇತುದಾರ ಬಿ.ಎಸ್.ರಾಘವೇಂದ್ರ ಠಾಕೂರ್ ಪಾಲ್ಗೊಂಡಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು