ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದುರ್ಬಲರ ಪರ ಯೋಜನೆ ರೂಪಿಸಲಿ’

Last Updated 8 ನವೆಂಬರ್ 2019, 14:03 IST
ಅಕ್ಷರ ಗಾತ್ರ

ಹೊಸಪೇಟೆ: ‘ದುರ್ಬಲರ ಪರವಾದ ಯೋಜನೆಗಳನ್ನು ರೂಪಿಸಲು ಸರ್ಕಾರ ಹೆಚ್ಚಿನ ಒತ್ತು ಕೊಡಬೇಕು’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಟಿ.ಆರ್‌. ಚಂದ್ರಶೇಖರ್‌ ಹೇಳಿದರು.

ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಒಕ್ಕೂಟವು ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ಆರ್ಥಿಕ ಬಿಕ್ಕಟ್ಟು ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉಳ್ಳವರ ಪರವಾದ ಯೋಜನೆಗಳನ್ನು ರೂಪಿಸಿ, ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿವೆ. ಅದರ ಬದಲು ದುರ್ಬಲರು, ಇಲ್ಲದವರ ಪರ ಯೋಜನೆಗಳನ್ನು ರೂಪಿಸಲು ಮುಂದಾಗಬೇಕು’ ಎಂದರು.

‘ಇಲ್ಲದವರ ಸಂಕಷ್ಟಗಳನ್ನು ವ್ಯವಸ್ಥಿತವಾಗಿ ಮರೆ ಮಾಚಲಾಗುತ್ತಿದೆ. ನಿರುದ್ಯೋಗ, ಬಡತನ ತಾಂಡವವಾಡುತ್ತಿದೆ. ಹೀಗಿದ್ದರೂ ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಎ.ಐ.ಡಿ.ವೈ.ಒ. ಅಧ್ಯಕ್ಷ ಎ. ರಾಮಾಂಜಿನಪ್ಪ ಮಾತನಾಡಿ, ‘ಶೇ 90ರಷ್ಟು ಜನರಿಂದ ಅಷ್ಟೇ ಪ್ರಮಾಣದ ಆದಾಯ ತೆರಿಗೆ ಮೂಲಕ ಸರ್ಕಾರದ ಬೊಕ್ಕಸಕ್ಕೆ ಬರುತ್ತದೆ. ಆದರೆ, ಅವರಿಗಾಗಿ ಯಾವುದೇ ಯೋಜನೆಗಳನ್ನು ರೂಪಿಸುತ್ತಿಲ್ಲ’ ಎಂದರು.

ಎ.ಐ.ಡಿ.ವೈ.ಒ. ಜಿಲ್ಲಾ ಅಧ್ಯಕ್ಷ ಪ್ರಶಾಂತ್‌, ಜಿಲ್ಲಾ ಕಾರ್ಯದರ್ಶಿ ಯರ್ರಿಸ್ವಾಮಿ, ಜಿಲ್ಲಾ ಸಮಿತಿ ಸದಸ್ಯರಾದ ರವಿ, ಅಭಿಷೇಕ್ ಕಾಳೆ, ಉಮೇಶ್, ಮಂಜುಳಾ, ಕಲ್ಮೇಶ್, ಹುಲುಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT