ಶುಕ್ರವಾರ, ಮಾರ್ಚ್ 31, 2023
32 °C

‘ಕೌಶಲ ಕಲಿಕೆಗೆ ವಿಫುಲ ಅವಕಾಶ‘

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ(ವಿಜಯನಗರ): ‘ನೂತನ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಜ್ಞಾನ ಮತ್ತು ಕೌಶಲ ಕಲಿಕೆಗೆ ವಿಫುಲ ಅವಕಾಶಗಳಿವೆ’ ಎಂದು ವಿಜಯನಗರ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಎಚ್.ಎಂ.ಚಂದ್ರಶೇಖರ ಶಾಸ್ತ್ರಿ ತಿಳಿಸಿದರು.

ನಗರದ ಶಂಕರ್ ಆನಂದ್ ಸಿಂಗ್ ಕಾಲೇಜು ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಠಾನ ಕುರಿತು ವಿದ್ಯಾರ್ಥಿ ಮತ್ತು ಪೋಷಕರಿಗಾಗಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

‘ನೂತನ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ಜ್ಞಾನ ಮತ್ತು ಕೌಶಲ ಕಲಿಯಲು ಒತ್ತು ಕೊಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ’ ಎಂದರು.

ಕಾಲೇಜಿನ ಪ್ರಾಂಶುಪಾಲ ಬಿ.ಜಿ.ಕನಕೇಶಮೂರ್ತಿ ಮಾತನಾಡಿ, ‘ನೂತನ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಅಂಶಗಳ ಜೊತೆಗೆ ಸ್ಥಳೀಯ ಭಾಷೆಗಳಿಗೆ ಒತ್ತು ನೀಡಲಾಗಿದೆ‌. ನಾಲ್ಕು ವರ್ಷಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಅಧ್ಯಯನ, ಸಂಶೋಧನೆಗೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಕಲಿಕೆಯ ಆರಂಭದಲ್ಲೇ ಗುರಿ ನಿರ್ದಿಷ್ಟ ಪಡಿಸಿಕೊಂಡರೆ ಉತ್ತಮ ಫಲಿತಾಂಶಕ್ಕೆ ದಾರಿಯಾಗಲಿದೆ’ ಎಂದರು.

ಪ್ರಾಧ್ಯಾಪಕರಾದ ಟಿ.ಎಚ್‌. ಬಸವರಾಜ ಕೆ.ವೆಂಕಟೇಶ್, ಮಂಜುನಾಥ ಎಚ್.ಅರೆಂಟನೂರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.