ಗುರುವಾರ , ಆಗಸ್ಟ್ 5, 2021
21 °C

ವಿಜಯನಗರದಲ್ಲಿ ಸಂಪೂರ್ಣತಗ್ಗಿದ ಕೋವಿಡ್‌ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಯಾವುದೇ ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿಲ್ಲ.

ಕಳೆದ ಕೆಲವು ದಿನಗಳಿಂದ ಸತತವಾಗಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಕೆಯ ಹಾದಿಯಲ್ಲಿತ್ತು. ಆದರೆ, ಭಾನುವಾರ ಒಂದೇ ಒಂದು ಹೊಸ ಪ್ರಕರಣ ವರದಿಯಾಗದ ಕಾರಣ ಸಾರ್ವಜನಿಕರು ಇನ್ನಷ್ಟು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ, ಹರಪನಹಳ್ಳಿಯಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಹೊಸಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 28 ಸಕ್ರಿಯ ಪ್ರಕರಣಗಳಿದ್ದರೆ, ಹರಪನಹಳ್ಳಿಯಲ್ಲಿ 19, ಹಗರಿಬೊಮ್ಮನಹಳ್ಳಿಯಲ್ಲಿ 14 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಹೂವಿನಹಡಗಲಿಯಲ್ಲಿ 10, ಕೂಡ್ಲಿಗಿಯಲ್ಲಿ ಮೂರು ಸಕ್ರಿಯ ಪ್ರಕರಣಗಳಿವೆ.

ಅಷ್ಟೇ ಅಲ್ಲ, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಕೂಡ ನಿಂತಿದ್ದು, ಕಳೆದೆರಡು ದಿನಗಳಿಂದ ಸಾವಿನ ಪ್ರಕರಣಗಳು ವರದಿಯಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು