ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳು ಮೈಗಳ್ಳತನ ಮಾಡತಕ್ಕದ್ದಲ್ಲ: ಜೊಲ್ಲೆ ಎಚ್ಚರಿಕೆ

ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಎಚ್ಚರಿಕೆ
Last Updated 3 ಮಾರ್ಚ್ 2022, 12:25 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಇಂದಿನ ಪ್ರಗತಿ ಪರಿಶೀಲನಾ ಸಭೆಯ ಬಗ್ಗೆ ಶೇ 50ರಷ್ಟು ಸಮಾಧಾನವಿದೆ. ಹಲವು ಅಧಿಕಾರಿಗಳಿಗೆ ಮಾಹಿತಿ ಕೊರತೆ ಇದೆ. ವರದಿ ಪ್ರಸ್ತುತಪಡಿಸುವ ವಿಧಾನವೂ ಗೊತ್ತಿಲ್ಲ. ಅಧಿಕಾರಿಗಳು ಮೈಗಳ್ಳತನ ಮಾಡತಕ್ಕದ್ದಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಗುರುವಾರ ನಗರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ, ಅವುಗಳ ಬಗ್ಗೆ ಸರಿಯಾಗಿ ಪ್ರಚಾರ ಆಗುತ್ತಿಲ್ಲ. ಎಲ್ಲ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಅನೇಕ ಉತ್ತಮ ಕಾರ್ಯಕ್ರಮಗಳಿವೆ. ಅವುಗಳ ಅನುಷ್ಠಾನ ಸೂಕ್ತ ರೀತಿಯಲ್ಲಿ ಆಗಬೇಕು’ ಎಂದು ತಾಕೀತು ಮಾಡಿದರು.

‘ಉಕ್ರೇನ್‌ ಘಟನೆ ನಮಗೆ ಹೊಸ ಅನುಭವ’:

‘ಉಕ್ರೇನ್‌ನಲ್ಲಿ ಸದ್ಯ ನಿರ್ಮಾಣವಾಗಿರುವ ಸನ್ನಿವೇಶ ಎಂದೂ ಕೂಡ ಬಂದಿರಲಿಲ್ಲ. ಇದು ನಮಗೆ ಹೊಸ ಅನುಭವ. ಆದರೆ, ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತಂದು ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ಕಲ್ಪಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಬರುವ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ’ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.

‘ಭಾರತದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ದುಬಾರಿ ಶುಲ್ಕ ಇದೆ. ಕಡಿಮೆ ಶುಲ್ಕದಲ್ಲಿ ಶಿಕ್ಷಣ ಸಿಗುವುದರಿಂದ ಉಕ್ರೇನಿಗೆ ಹೋಗಿ ನಮ್ಮ ಮಕ್ಕಳು ತೊಂದರೆಗೆ ಸಿಲುಕಿಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ಹೊಣೆ’ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರ ಬಗ್ಗೆ ನೀವೇನೂ ಹೇಳುವಿರಿ ಎಂದು ಸುದ್ದಿಗಾರರು ಸಭೆಯ ನಂತರ ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

‘ವಿಜಯನಗರ ಜಿಲ್ಲೆಯ ನಾಲ್ವರು ಸೇರಿದಂತೆ ರಾಜ್ಯದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸರ್ಕಾರ ಶ್ರಮಿಸುತ್ತಿದೆ. ಎಲ್ಲ ವಿದ್ಯಾರ್ಥಿಗಳು ಸಂಪರ್ಕದಲ್ಲಿದ್ದಾರೆ. ಯಾರೂ ಗಾಬರಿಪಡುವ ಅವಶ್ಯಕತೆಯಿಲ್ಲ’ ಎಂದು ಹೇಳಿದರು.

‘ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆಯಾದ ನಂತರ ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಮಾತನಾಡಿರುವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿರುವೆ. ಎಲ್ಲ ಕ್ಷೇತ್ರಗಳ ಅಭಿವೃದ್ಧಿ ನಮ್ಮ ಗುರಿ. ಅಭಿವೃದ್ಧಿಯಲ್ಲಿ ಪಕ್ಷಪಾತ ಮಾಡುವುದಿಲ್ಲ. ಶಾಲೆ, ಕಾಲೇಜು ಸೇರಿದಂತೆ ಯಾವುದೇ ಅಭಿವೃದ್ಧಿ ವಿಚಾರದ ಕುರಿತು ಶಾಸಕರು ಗಮನಕ್ಕೆ ತಂದರೆ ಅದನ್ನು ಬಗೆಹರಿಸಲಾಗುವುದು’ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT