ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯಿತಿ ತೆರವಾದ ಸ್ಥಾನಗಳಿಗೆ ಡಿ. 27ಕ್ಕೆ ಮತದಾನ

Last Updated 13 ಡಿಸೆಂಬರ್ 2021, 14:13 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತೆರವಾದ ಸದಸ್ಯ ಸ್ಥಾನಗಳಿಗೆ ಡಿ. 27ರಂದು ಮತದಾನ ನಡೆಯಲಿದ್ದು, ಸೋಮವಾರದಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿದೆ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಡಿ. 17ರಂದು ಕೊನೆಯ ದಿನವಾಗಿದೆ. ಡಿ. 18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಡಿ. 20 ಕೊನೆ ದಿನವಾಗಿದೆ ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಗರಿಬೊಮ್ಮನಹಳ್ಳಿ ತಾಲ್ಲೂಕಿನ 17-ಹಂಪಪಟ್ಟಣ ಗ್ರಾಮ ಪಂಚಾಯಿತಿಯ 18 ಸ್ಥಾನ, ಹರಪನಹಳ್ಳಿಯ 07-ಅಡವಿಹಳ್ಳಿ ಪಂಚಾಯಿತಿಯ 2 ಸ್ಥಾನ, ಹೊಸಪೇಟೆ ತಾಲ್ಲೂಕಿನ 114-ಡಣಾಪುರ, ಕೂಡ್ಲಿಗಿ ತಾಲೂಕಿನ 18-ಶಿವಪುರ, 21-ಮೊರಬ, ಉಚ್ಚಂಗಿದುರ್ಗ ಪಂಚಾಯಿತಿಯ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT