ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ ಸದಸ್ಯತ್ವ ನೋಂದಣಿ ಅಭಿಯಾನ ಆರಂಭ

Last Updated 16 ಜೂನ್ 2019, 13:15 IST
ಅಕ್ಷರ ಗಾತ್ರ

ಹೊಸಪೇಟೆ: ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವ ನೋಂದಣಿ ಅಭಿಯಾನ ಮಾಸ ಭಾನುವಾರ ನಗರದಲ್ಲಿ ಆರಂಭಗೊಂಡಿತು.

ಮೊದಲ ದಿನ 17 ಜನ ಹೆಸರು ನೋಂದಣಿ ಮಾಡಿಸಿಕೊಂಡರು. ಆಜೀವ ಸದಸ್ಯರಾಗಲು ₹500 ಶುಲ್ಕ, ಎರಡು ಇತ್ತೀಚಿನ ಭಾವಚಿತ್ರ ಕೊಡಬೇಕು.

ಇದಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಎತ್ನಳ್ಳಿ ಮಲ್ಲಯ್ಯ, ’ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಮೂಲಕ ಸಾಹಿತ್ಯ ಕಾರ್ಯಕ್ರಮಗಳಲ್ಲಿ ಎಲ್ಲರೂ ಭಾಗಿಯಾಗುವಂತೆ ಮಾಡುವುದು. ಇದರ ಜೊತೆಗೆ ಈಗಾಗಲೇ ಸದಸ್ಯತ್ವ ಹೊಂದಿದವರ ವಿಳಾಸ ಬದಲಾದರೆ ಅದನ್ನು ಬದಲಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ‘ ಎಂದು ಹೇಳಿದರು.

ಕರುನಾಡ ಕಲಿಗಳ ಕ್ರಿಯಾಶೀಲ ಸಂಘದ ಅಧ್ಯಕ್ಷಪಿ.ವಿ. ವೆಂಕಟೇಶ,ಪರಿಷತ್ತಿನ ಕಾರ್ಯದರ್ಶಿ ಎಚ್‌.ಎಂ. ಜಂಬುನಾಥ, ಕಮಲಾಪುರ ಹೋಬಳಿ ಘಟಕದ ಅಧ್ಯಕ್ಷ ದಯಾನಂದ ಕಿನ್ನಾಳ್‌, ವಿಜಯನಗರ ಕಾಲೇಜಿನ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ಲೇಖಕಿಯರಾದ ಡಾ. ಸುಲೋಚನಾ, ಅಂಜಲಿ ಬೆಳಗಲಿ,ಎಸ್.ಎಂ. ಗಿರೀಶ್‌, ಮಧುರ ಚೆನ್ನ ಶಾಸ್ತ್ರಿ, ಸೋದಾ ವಿರೂಪಾಕ್ಷಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT