ಮಂಗಳವಾರ, ಸೆಪ್ಟೆಂಬರ್ 21, 2021
21 °C

ಹೊಸಪೇಟೆ: 15.50 ಕ್ವಿಂಟಲ್‌ ಪಡಿತರ ಅಕ್ಕಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಇಲ್ಲಿನ ಭುವನೇಶ್ವರಿ ನಗರದ ಮೂರನೇ ಅಡ್ಡರಸ್ತೆಯಲ್ಲಿ ಅಮಾನುಲ್ಲಾ ಎಂಬುವರ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 15.50 ಕ್ವಿಂಟಲ್‌ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.

ಅಕ್ರಮ ದಾಸ್ತಾನು ಮಾಡಿದ್ದ ಅಮಾನುಲ್ಲಾ ವಿರುದ್ಧ ಕರ್ನಾಟಕ ಅಗತ್ಯ ವಸ್ತುಗಳ ಕಾಯ್ದೆ ಅಡಿ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ಇನ್‌ಸ್ಪೆಕ್ಟರ್‌ ಆರ್‌. ಅಜಿತ್‌ ಕುಮಾರ್‌, ಶಿರಸ್ತೇದಾರ ಎಚ್‌. ನಾಗರಾಜ್‌, ಎಎಸ್‌ಐ ಕುಮಾರ್, ಕಾನ್‌ಸ್ಟೆಬಲ್‌ ಪಿ.ಸಿ. ನಾಗರಾಜ್‌, ಗ್ರಾಮ ಸಹಾಯಕ ಮೋಹನ್‌, ಮಂಜುನಾಥ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.