ಶನಿವಾರ, ಸೆಪ್ಟೆಂಬರ್ 25, 2021
22 °C

‘ತುಂಗಭದ್ರಾ ಜಲಾಶಯದಲ್ಲಿ ಹೂಳು ತೆಗೆಯಲು ಬಿಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ತುಂಗಭದ್ರಾ ಜಲಾಶಯದಲ್ಲಿ ತುಂಬಿಕೊಂಡಿರುವ ಹೂಳು ತೆಗೆಯಲು ಆಡಳಿತ ಮಂಡಳಿ ಅನುಮತಿ ನೀಡಬೇಕು’ ಎಂದು ತುಂಗಭದ್ರಾ ರೈತ ಸಂಘದ ಜಿಲ್ಲಾ ಅಧ್ಯಕ್ಷ ಜಿ. ಪುರುಷೋತ್ತಮಗೌಡ ಮನವಿ ಮಾಡಿದ್ದಾರೆ.

ಈ ಸಂಬಂಧ ಅವರು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

‘ಸತತ ಎರಡು ವರ್ಷಗಳಿಂದ ಅಣೆಕಟ್ಟೆಯಿಂದ ಹೂಳು ತೆಗೆದು ರೈತರ ಜಮೀನುಗಳಿಗೆ ಹಾಕುತ್ತಿದ್ದೇವೆ. ಈ ಕೆಲಸಕ್ಕೆ ಜಿಲ್ಲೆಯ ವಿವಿಧ ಸ್ವಾಮೀಜಿಗಳು, ಸಂಘ ಸಂಸ್ಥೆಗಳ ಮುಖಂಡರು, ರೈತರು ಸಹಕಾರ ಕೊಟ್ಟಿದ್ದಾರೆ. ಈ ವರ್ಷ ಕೂಡ ಹೂಳು ತೆಗೆಯಲು ಅನುಮತಿ ಕೊಡಬೇಕು’ ಎಂದು ಕೋರಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು