ಮಂಗಳವಾರ, ಏಪ್ರಿಲ್ 7, 2020
19 °C

22ರಂದು ಪೆಟ್ರೋಲ್, ಡೀಸೆಲ್ ಸಿಗಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ಭಾನುವಾರದ (ಮಾ.22) ‘ಜನತಾ ಕರ್ಫ್ಯೂ’ ಹಿನ್ನೆಲೆಯಲ್ಲಿ ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಬಳ್ಳಾರಿ ಜಿಲ್ಲೆಯ ಎಲ್ಲಾ ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ವಿತರಿಸದಿರಲು ತೀರ್ಮಾನಿಸಲಾಗಿದೆ’ ಎಂದು ಬಳ್ಳಾರಿ ಜಿಲ್ಲಾ ಪೆಟ್ರೋಲಿಯಂ ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕೋತಂಬ್ರಿ ತಿಳಿಸಿದ್ದಾರೆ.

‘ಆದರೆ, ಆ ದಿನ ತುರ್ತು ಸೇವೆಗಳಾದ ಆಂಬ್ಯುಲೆನ್ಸ್, ಪೊಲೀಸ್, ಅಗ್ನಿಶಾಮಕ ದಳ ಹಾಗೂ ಸರ್ಕಾರಿ ಕಚೇರಿಗಳ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಎಂದಿನಂತೆ ಪೂರೈಸಲು ಎಲ್ಲಾ ಬಂಕ್‌ಗಳಲ್ಲಿ ಒಬ್ಬರನ್ನು ಮಾತ್ರ ನಿಯೋಜಿಸಲಾಗುವುದು. ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಇದು ಮಹತ್ವದ್ದಾಗಿದ್ದು, ಸಾರ್ವಜನಿಕರು ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)