ಬುಧವಾರ, ಆಗಸ್ಟ್ 17, 2022
26 °C

ಜಾರಿ ನಿರ್ದೇಶನಾಲಯ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಪಾಪುಲರ್ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೌಫ್‌ ಷರೀಫ್‌ ಅವರನ್ನು ವಿನಾಕಾರಣ ಬಂಧಿಸಲಾಗಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶನಿವಾರ ಸಂಜೆ ಇಲ್ಲಿನ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಜಾರಿ ನಿರ್ದೇಶನಾಲಯ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಮಾತನಾಡಿದ ಸಂಘಟನೆಯ ರಾಜ್ಯ ಮಂಡಳಿ ಸದಸ್ಯ ಅಲ್ತಾಫ್‌ ಹೊಸಪೇಟೆ, ‘ಪಂಜಾಬ್‌, ಹರಿಯಾಣದಲ್ಲಿ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗ ಜನರ ಗಮನ ಅತ್ತ ಹರಿದಿದೆ. ಆ ಗಮನ ಬೇರೆಡೆ ಸೆಳೆಯುವುದಕ್ಕಾಗಿ ವಿನಾಕಾರಣ ನಮ್ಮ ಸಂಘಟನೆಯ ಮುಖಂಡನ ಮನೆ ಮೇಲೆ ದಾಳಿ ನಡೆಸಿ, ಬಂಧಿಸಲಾಗಿದೆ. ಇದು ಖಂಡನಾರ್ಹ’ ಎಂದರು.

‘ರೌಫ್‌ ಷರೀಫ್‌ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಸಲೀಂ ಮಲಿಕ್‌, ಕಾರ್ಯದರ್ಶಿ ಮುಜಿಬುರ್‌ ರೆಹಮಾನ್‌, ಮುಖಂಡರಾದ ಗೌಸ್‌, ಸೊಹೆಲ್‌, ಫೈಜ್‌, ಶೇಕ್ಷಾವಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.