ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿಯಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

Last Updated 8 ಜುಲೈ 2021, 15:15 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಅರಣ್ಯ ಇಲಾಖೆಯು ತಾಲ್ಲೂಕಿನ ಹಂಪಿಯಲ್ಲಿ ಹಮ್ಮಿಕೊಂಡಿರುವ ಸಸಿ ನೆಡುವ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಗುರುವಾರ ಸಂಜೆ ಚಾಲನೆ ನೀಡಿದರು.

ಅನಿರುದ್ಧ್‌ ಅವರು ಸಸಿ ನೆಟ್ಟು, ಅದಕ್ಕೆ ನೀರೆರೆದು ಚಾಲನೆ ಕೊಟ್ಟರು. ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯ ಇಲಾಖೆಯು ಹಂಪಿಯಲ್ಲಿ ರಸ್ತೆಬದಿಯಲ್ಲಿ ಐದು ನೂರು ಸಸಿಗಳನ್ನು ನೆಟ್ಟು, ಅದನ್ನು ಪೋಷಿಸಲು ಯೋಜನೆ ರೂಪಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್‌, ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಂತಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್, ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಉಮೇಶ್ ಎಂ, ವಲಯ ಅರಣ್ಯ ಅಧಿಕಾರಿ ವಿನಯ್ ಕೆ.ಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT