ನಾಯಿ, ನರಿ, ಕೋಣಗಳಂತೆ ಶಾಸಕರನ್ನು ಖರೀದಿಸಿ ಬಿಜೆಪಿ ಸರ್ಕಾರ ರಚಿಸಿತ್ತು: ಆಂಜನೇಯ

7
‘ಸರ್ಕಾರ ಕೆಲಸ ಮಾಡಲು ಬಿಡಿ’

ನಾಯಿ, ನರಿ, ಕೋಣಗಳಂತೆ ಶಾಸಕರನ್ನು ಖರೀದಿಸಿ ಬಿಜೆಪಿ ಸರ್ಕಾರ ರಚಿಸಿತ್ತು: ಆಂಜನೇಯ

Published:
Updated:

ಹೊಸಪೇಟೆ: ‘ರಾಜ್ಯದಲ್ಲಿ ಪ್ರಜಾಸತ್ತಾತ್ಮಕವಾಗಿ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಅದು ಕೆಲಸ ನಿರ್ವಹಿಸಲು ಬಿಡಬೇಕು’ ಎಂದು ಕಾಂಗ್ರೆಸ್‌ ಮುಖಂಡ ಎಚ್‌. ಆಂಜನೇಯ ತಾಕೀತು ಮಾಡಿದರು.

ತಾಲ್ಲೂಕಿನ ಕೊಂಡನಾಯಕನಹಳ್ಳಿ ಸಮೀಪದ ಮಾತಂಗ ಸೇವಾಶ್ರಮಕ್ಕೆ ಶನಿವಾರ ಭೇಟಿ ನೀಡುವುದಕ್ಕೂ ಮುನ್ನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ದಿನದಿಂದಲೇ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಸರ್ಕಾರವನ್ನು ಉರುಳಿಸಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ತಂತ್ರಗಾರಿಕೆ, ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿ ಹೊರಟಿರುವುದು ಸರಿಯಲ್ಲ. ಬಿಜೆಪಿಗೆ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದರು. ಆದರೆ, ಬಹುಮತ ಸಾಬೀತು ಪಡಿಸಲು ಆಗದೆ ಅಧಿಕಾರ ಕಳೆದುಕೊಂಡರು’ ಎಂದರು.

‘2008ರಲ್ಲಿ ನರಿ, ನಾಯಿ, ಕೋಣಗಳಂತೆ ಅನ್ಯ ಪಕ್ಷದ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದ್ದರು. ಆಗ ಏನೆಲ್ಲ ಮಾಡಿದ್ದರೂ ಎನ್ನುವುದು ಎಲ್ಲರಿಗೂ ಗೊತ್ತಿದೆ. ಒಂದು ಸಲ ಅಧಿಕಾರದ ರುಚಿ ನೋಡಿರುವ ಅವರು ಅದನ್ನು ಪಡೆಯಲು ಮೇಲಿಂದ ಮೇಲೆ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಹೇಳಿದರು.

‘ಸಮ್ಮಿಶ್ರ ಸರ್ಕಾರ ಮುಂದುವರಿಯುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಜಾರಕಿಹೋಳಿ ಸಹೋದರರೇ ಸ್ಪಷ್ಟಪಡಿಸಿದ್ದಾರೆ. ಆದಕಾರಣ ಯಾವುದೇ ತೊಡಕಿಲ್ಲದೆ ಸರ್ಕಾರ ಐದು ವರ್ಷ ಕೆಲಸ ನಿರ್ವಹಿಸಲಿದೆ. ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಿದೆ’ ಎಂದರು.

‘ನೀಡಿರುವ ಭರವಸೆಯಂತೆ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಪ್ರವಾಹದಿಂದ ಕೊಡಗಿನಲ್ಲಿ ಅಪಾರ ಸಾವು ನೋವು ಸಂಭವಿಸಿದೆ. ಅಲ್ಲಿನ ಜನ ಸಂಕಷ್ಟದಲ್ಲಿದ್ದಾರೆ. ಬಿಜೆಪಿಯವರು ರಾಜಕೀಯ ಮಾಡುವುದನ್ನು ಬಿಟ್ಟು ಅಲ್ಲಿನವರ ಬದುಕು ಕಟ್ಟಿಕೊಡಲು ಕೈಜೋಡಿಸಬೇಕು. ಇತರೆ ಪಕ್ಷಗಳು ಗಮನ ಹರಿಸಬೇಕು’ ಎಂದು ಹೇಳಿದರು.


ಶನಿವಾರ ಹೊಸಪೇಟೆಗೆ ಬಂದಿದ್ದ ಕಾಂಗ್ರೆಸ್‌ ಮುಖಂಡ ಎಚ್‌. ಆಂಜನೇಯ ಅವರನ್ನು ಮಾದಿಗ ಸಮಾಜದ ಮುಖಂಡರು ಸ್ವಾಗತಿಸಿದರು

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !