ಹೊಸಪೇಟೆ: ಪಿಪಿಇ ಕಿಟ್ ಖರೀದಿಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ರಾಜೀನಾಮೆಗೆ ಆಗ್ರಹಿಸಿ ಸಿಪಿಎಂ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿದರು.

ಹಗರಣದಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು. ಅವ್ಯವಹಾರ ತನಿಖೆಗೆ ತಡೆಯಾಜ್ಞೆ ನೀಡಿರುವ ವಿಧಾನಸಭಾಧ್ಯಕ್ಷರ ವಿರುದ್ಧ ಹಕ್ಕುಚ್ಯುತಿ ಮಂಡಿಸಬೇಕು. ಅವ್ಯವಹಾರದ ಕುರಿತು ಹೆಚ್ಚಿನ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ವೈದ್ಯರು, ನರ್ಸ್ಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಬಾಕಿ ಉಳಿಸಿಕೊಂಡಿರುವ ವೇತನ ಕೂಡಲೇ ಪಾವತಿಸಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಹುನ್ನಾರ ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್. ಭಾಸ್ಕರ್ ರೆಡ್ಡಿ, ಮುಖಂಡರಾದ ಮರಡಿ ಜಂಬಯ್ಯ ನಾಯಕ, ಎ. ಕರುಣಾನಿಧಿ, ಕೆ. ನಾಗರತ್ನ, ಎಂ. ಗೋಪಾಲ್, ಎನ್. ಯಲ್ಲಾಲಿಂಗ, ಶಕುಂತಲಮ್ಮ, ಸ್ವಪ್ನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.